ಲೈಂಗಿಕ ಕಿರುಕುಳ ಆರೋಪ – ಬಾಲಿವುಡ್‌‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್ – Vishwanews24

Featured, ರಾಷ್ಟ್ರ ನ್ಯೂಸ್

ಲೈಂಗಿಕ ಕಿರುಕುಳ ಆರೋಪ – ಬಾಲಿವುಡ್‌‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಚಾರ್ಜ್ ಶೀಟ್

ಮುಂಬೈ : ಬಾಲಿವುಡ್‌‌ನ ಖ್ಯಾತ ನೃತ್ಯ ಸಂಯೋಜಕ ಗಣೇಶ್ ಆಚಾರ್ಯ ವಿರುದ್ಧ ಸಹ ನೃತ್ಯಗಾತಿಗೆ ಲೈಂಗಿಕ ಕಿರುಕುಳದ ಆರೋಪ ಪ್ರಕರಣದಲ್ಲಿ ಮುಂಬೈ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಗಣೇಶ್ ಆಚಾರ್ಯ ಮತ್ತು ಅವರ ಸಹಾಯಕರ ವಿರುದ್ಧ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ), 354-ಸಿ, 354-ಡಿ (ಹಿಂಬಾಲಿಸುವಿಕೆ), 509 (ಮಹಿಳೆಗೆ ಅವಮಾನ), 323 (ನೋವು), 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ), 506 (ಅಪರಾಧ ಬೆದರಿಕೆ)ದ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇನ್ನು ಗಣೇಶ್ ಆಚಾರ್ಯ ವಿರುದ್ಧ ಸಹ ಡ್ಯಾನ್ಸರ್​ ಒಬ್ಬರು ಲೈಂಗಿಕ ಕಿರಕುಳ ಆರೋಪ ಮಾಡಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಗಣೇಶ್ ಕೋರಿದ್ದರು. ಆದರೆ ಇದನ್ನು ನಿರಾಕರಿಸಿದೆ. ಚಿತ್ರರಂಗದಲ್ಲಿ ಯಶಸ್ಸು ಸಿಗಬೇಕಾದರೆ ದೈಹಿಕವಾಗಿ ಸಹಕರಿಸುವಂತೆ ಹೇಳಿದ್ದರು. ಆದರೆ ನಾನು ವಿರೋಧಿಸಿದ್ದೆ. ಹೀಗಾಗಿ ಭಾರತೀಯ ಸಿನಿಮಾ ಮತ್ತು ದೂರದರ್ಶನ ನೃತ್ಯ ನಿರ್ದೇಶಕರ ಸಂಘದಿಂದ ನಾನು ಸದಸ್ಯತ್ವ ಕಳೆದುಕೊಂಡೆ ಎಂದು ಆರೋಪಿಸಿದ್ದಾರೆ.

ಉಡುಪಿ : ಮುಸಲ್ಮಾನರ ನಿಲುವು, ಆಲೋಚನೆ ಮತ್ತು ಆಚರಣೆಗಳು ಬದಲಾದರೆ ಮಾತ್ರ ಹಿಂದೂ ಸಮಾಜದ ಜೊತೆ ಸಾಮರಸ್ಯ ಸಾಧಿಸಲು ಸಾಧ್ಯ : ಕೇಶವ ಹೆಗ್ಡೆ – Vishwanews24

Leave a Reply