ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲು – Vishwanews24
ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲು – Vishwanews24
ಮಂಗಳೂರು: ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ಧ ಇಂಟರ್ನ್‌ಶಿಪ್ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದೆ.
ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಅಧರಿಸಿ ನಿನ್ನೆ ರಾತ್ರಿ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ.
ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ 20 ವರ್ಷದ ಸಂತ್ರಸ್ತೆ ಕಳೆದ ಆಗಸ್ಟ್ 8ರಂದು ನ್ಯಾಯವಾದಿ ಕೆ.ಎಸ್.ಎನ್.ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದ. ಕಳೆದ ಸೆ.25ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ : ಮೋಹನ್ ಭಾಗವತ್ – Vishwanews24
ಇನ್ನು ಸಂತ್ರಸ್ತೆ ಹಾಗೂ ವಕೀಲರ ನಡುವೆ ನಡೆದ ಫೋನ್ ಸಂಭಾಷಣೆಯೆಂದು ಹೇಳಲಾದ 11 ನಿಮಿಷ 55 ಸೆಕೆಂಡ್ಸ್ ಇರುವ ಆಡಿಯೋ ಒಂದು ವೈರಲ್ ಆಗಿದೆ.ವಕೀಲ ರಾಜೇಶ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ 354 ( A ) , 354 ( B ) , 354 ( C ) , 376 , 511 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಪಾಂಡೇಶ್ವರದ ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
