Featured

ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್ ದಾಖಲು – Vishwanews24

ಲೈಂಗಿಕ ದೌರ್ಜನ್ಯದ ಆರೋಪ; ಮಂಗಳೂರಿನ ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಎಫ್​ಐಆರ್ ದಾಖಲು – Vishwanews24

ಮಂಗಳೂರು: ಮಂಗಳೂರಿನ ಖ್ಯಾತ ವಕೀಲ K.S.N.ರಾಜೇಶ್ ಭಟ್ ವಿರುದ್ಧ ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಪಟ್ಟಂತೆ FIR ದಾಖಲಾಗಿದೆ.

ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ಎಲ್ಎಲ್‌ಬಿ ವಿದ್ಯಾರ್ಥಿನಿ ದೂರು ಅಧರಿಸಿ ನಿನ್ನೆ ರಾತ್ರಿ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ದೂರು ನೀಡಿದ್ದಾರೆ. ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ.

ಮಂಗಳೂರಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿರುವ 20 ವರ್ಷದ ಸಂತ್ರಸ್ತೆ ಕಳೆದ ಆಗಸ್ಟ್ 8ರಂದು ನ್ಯಾಯವಾದಿ ಕೆ.ಎಸ್.ಎನ್.ರಾಜೇಶ್ ಅವರ ಕರಂಗಲ್ಪಾಡಿಯ ಕಚೇರಿಯಲ್ಲಿ ತರಬೇತಿಗಾಗಿ ಸೇರಿದ್ದಳು. ಈ ನಡುವೆ, ರಾಜೇಶ್ ಯುವತಿಯನ್ನು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದ. ಕಳೆದ ಸೆ.25ರಂದು ತನ್ನ ಚೇಂಬರ್ ಒಳಗೆ ಕರೆದು ಅಸಭ್ಯವಾಗಿ ವರ್ತಿಸಿದ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾಗಿ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಇನ್ನು ಸಂತ್ರಸ್ತೆ ಹಾಗೂ ವಕೀಲರ ನಡುವೆ ನಡೆದ ಫೋನ್ ಸಂಭಾಷಣೆಯೆಂದು ಹೇಳಲಾದ 11 ನಿಮಿಷ 55 ಸೆಕೆಂಡ್ಸ್ ಇರುವ ಆಡಿಯೋ ಒಂದು ವೈರಲ್ ಆಗಿದೆ.ವಕೀಲ ರಾಜೇಶ್ ಭಟ್ ವಿರುದ್ಧ ಐಪಿಸಿ ಸೆಕ್ಷನ್ 354 ( A ) , 354 ( B ) , 354 ( C ) , 376 , 511 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಡೇಶ್ವರದ ಮಹಿಳಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

2 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

3 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

3 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

4 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

5 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

5 hours ago