ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ.
ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.
ಇನ್ನು ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್ 26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ವಜಾಗೊಳಿಸಿದ್ದರು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಜ್ವಲ್ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…