Featured

ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್‌ ರೇವಣ್ಣಗೆ ನ್ಯಾಯಾಂಗ ಬಂಧನ – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ : ಜು. 8 ರವರೆಗೆ ಪ್ರಜ್ವಲ್‌  ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಾಲ್ಕು‌ ದಿನಗಳ ಕಸ್ಟಡಿ ಮುಗಿದ ಹಿನ್ನಲೆಯಲ್ಲಿ 42ನೇ ಎಸಿಎಂಎಂ ಕೋರ್ಟ್‌ಗೆ ಶನಿವಾರ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಜುಲೈ 8 ರವರೆಗೆ ಪ್ರಜ್ವಲ್‌ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಆದೇಶ ನೀಡಿದ್ದಾರೆ.

ನ್ಯಾಯಾಲಯದಲ್ಲಿ ವಿಚಾರಣೆ ವೇಳೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲು ಪ್ರಜ್ವಲ್ ಪರ ವಕೀಲರ ಮನವಿ ಮಾಡಿದ್ದಾರೆ. ಆದರೆ, ಆಸ್ಪತ್ರೆಗೆ ದಾಖಲಿಸಲು ಅವಕಾಶ ನೀಡಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಇನ್ನು ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂನ್‌ 26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ವಜಾಗೊಳಿಸಿದ್ದರು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಕಸ್ಟಡಿಯಲ್ಲಿದ್ದ ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago