ತಿರುವನಂತಪುರಂ: ಮಲಯಾಳಂನ ಬೆಂಗಳೂರು ಡೇಸ್, ಪ್ರೇಮಂ ಮೊದಲಾದ ಹಿಟ್ ಸಿನೆಮಾಗಳ ನಾಯಕ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.
ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎರ್ನಾಕುಲಂನ ಊನುಕಲ್ ಪೊಲೀಸರು ಟಿಎನ್‌ಎಂಗೆ ಖಚಿತಪಡಿಸಿದ್ದಾರೆ.
ದೂರಿನಲ್ಲಿ ಏನಿದೆ?
2023ರ ನವೆಂಬರ್ ತಿಂಗಳಲ್ಲಿ ದುಬೈನ ಹೋಟೆಲೊಂದರಲ್ಲಿ ಈ ಘಟನೆ ನಡೆದಿದೆ. ದೂರು ನೀಡಿದ ಯುವತಿ ಬೇರೆ ಕೆಲಸದ ನಿಮಿತ್ತ ದುಬೈಗೆ ತೆರಳಿದ್ದರು. ಯುವತಿಯ ಸ್ನೇಹಿತೆ ಮೂಲಕ ಈಕೆ ಚಿತ್ರ ತಂಡದ ಬಳಿಗೆ ತೆರಳಿದ್ದರು ಎನ್ನಲಾಗಿದೆ.
ಯುವತಿ ತನ್ನನ್ನು ಕರೆದೊಯ್ದ ಮಹಿಳೆಯನ್ನು ಮೊದಲ ಆರೋಪಿ ಎಂದು ದೂರಿನಲ್ಲಿ ಹೇಳಿದ್ದಾರೆ. ಎಕೆ ಸುನಿಲ್, ಬಿನು, ಬಶೀರ್, ಕುಟ್ಟನ್ ಹಾಗೂ 6ನೇ ಆರೋಪಿ ನಿವಿನ್ ಪೌಲಿ ಎಂದು ದೂರು ದಾಖಲಿಸಿದ್ದಾರೆ.
ಮಾದಕದ್ರವ್ಯ ನೀಡಿ ದೌರ್ಜನ್ಯ ನಡೆಸಿದ್ದಾರೆ. 6 ದಿನಗಳ ಕಾಲ ಹೋಟೆಲ್‌ನಲ್ಲಿ ಕೂಡಿ ಹಾಕಿ ಈ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.
ದೂರು ದಾಖಲಾದ ಬೆನ್ನಲ್ಲೇ ನವಿನ್ ಪೌಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ವಿರುದ್ದ ನೀಡಿರುವ ದೂರು ಸುಳ್ಳು. ನಾನು ತಪ್ಪು ಮಾಡಿಲ್ಲ. ಹೀಗಾಗಿ ಸತ್ಯ ಹಾಗೂ ನ್ಯಾಯಕ್ಕಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ. ದೂರಿನಲ್ಲಿ ಉಲ್ಲೇಖಿಸಿರುವ ಘಟನೆ ನಡೆದಿಲ್ಲ. ಇದು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ಮುಂದಿನ ಎಲ್ಲಾ ನಡೆ ಕಾನೂನಾತ್ಮಕವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…