Featured

ಲೈಂಗಿಕ ದೌರ್ಜನ್ಯ ಪ್ರಕರಣ : ಸ್ಪಷ್ಟನೆ ನೀಡಿದ ಮಲಯಾಳಂ ನಟ ನಿವಿನ್ ಪೌಲಿ – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ : ಸ್ಪಷ್ಟನೆ ನೀಡಿದ ಮಲಯಾಳಂ ನಟ ನಿವಿನ್ ಪೌಲಿ

ತಿರುವನಂತಪುರಂ: ಮಲಯಾಳಂನ ಬೆಂಗಳೂರು ಡೇಸ್, ಪ್ರೇಮಂ ಮೊದಲಾದ ಹಿಟ್ ಸಿನೆಮಾಗಳ ನಾಯಕ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎರ್ನಾಕುಲಂನ ಊನುಕಲ್ ಪೊಲೀಸರು ಟಿಎನ್‌ಎಂಗೆ ಖಚಿತಪಡಿಸಿದ್ದಾರೆ.

ದೂರಿನಲ್ಲಿ ಏನಿದೆ?
2023ರ ನವೆಂಬರ್ ತಿಂಗಳಲ್ಲಿ ದುಬೈನ ಹೋಟೆಲೊಂದರಲ್ಲಿ ಈ ಘಟನೆ ನಡೆದಿದೆ. ದೂರು ನೀಡಿದ ಯುವತಿ ಬೇರೆ ಕೆಲಸದ ನಿಮಿತ್ತ ದುಬೈಗೆ ತೆರಳಿದ್ದರು. ಯುವತಿಯ ಸ್ನೇಹಿತೆ ಮೂಲಕ ಈಕೆ ಚಿತ್ರ ತಂಡದ ಬಳಿಗೆ ತೆರಳಿದ್ದರು ಎನ್ನಲಾಗಿದೆ.

ಯುವತಿ ತನ್ನನ್ನು ಕರೆದೊಯ್ದ ಮಹಿಳೆಯನ್ನು ಮೊದಲ ಆರೋಪಿ ಎಂದು ದೂರಿನಲ್ಲಿ ಹೇಳಿದ್ದಾರೆ. ಎಕೆ ಸುನಿಲ್, ಬಿನು, ಬಶೀರ್, ಕುಟ್ಟನ್ ಹಾಗೂ 6ನೇ ಆರೋಪಿ ನಿವಿನ್ ಪೌಲಿ ಎಂದು ದೂರು ದಾಖಲಿಸಿದ್ದಾರೆ.

ಮಾದಕದ್ರವ್ಯ ನೀಡಿ ದೌರ್ಜನ್ಯ ನಡೆಸಿದ್ದಾರೆ. 6 ದಿನಗಳ ಕಾಲ ಹೋಟೆಲ್‌ನಲ್ಲಿ ಕೂಡಿ ಹಾಕಿ ಈ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ದಾಖಲಾದ ಬೆನ್ನಲ್ಲೇ ನವಿನ್ ಪೌಲಿ ಸ್ಪಷ್ಟನೆ ನೀಡಿದ್ದಾರೆ. ನನ್ನ ವಿರುದ್ದ ನೀಡಿರುವ ದೂರು ಸುಳ್ಳು. ನಾನು ತಪ್ಪು ಮಾಡಿಲ್ಲ. ಹೀಗಾಗಿ ಸತ್ಯ ಹಾಗೂ ನ್ಯಾಯಕ್ಕಾಗಿ ನಾನು ಕಾನೂನು ಹೋರಾಟ ಮಾಡುತ್ತೇನೆ. ದೂರಿನಲ್ಲಿ ಉಲ್ಲೇಖಿಸಿರುವ ಘಟನೆ ನಡೆದಿಲ್ಲ. ಇದು ಸತ್ಯಕ್ಕೆ ದೂರವಾಗಿದೆ. ಹೀಗಾಗಿ ಮುಂದಿನ ಎಲ್ಲಾ ನಡೆ ಕಾನೂನಾತ್ಮಕವಾಗಿರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

 

 

 

 

 

 

 

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

22 minutes ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

26 minutes ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 hour ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

3 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

4 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

4 hours ago