Featured

ಲೈಂಗಿಕ ದೌರ್ಜನ್ಯ ಪ್ರಕರಣ :  ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು – vishwanews24

ಲೈಂಗಿಕ ದೌರ್ಜನ್ಯ ಪ್ರಕರಣ :  ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮನೆಯ ಕೆಲಸದಾಕೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ  ತಂದೆ, ಮಾಜಿ ಸಚಿವ ಹೆಚ್​ಡಿ ರೇವಣ್ಣ  ಅವರಿಗೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್​ ಮೆಜಿಸ್ಟ್ರೇಟ್​ ಕೋರ್ಟ್​ (ಎಸಿಎಂಎಂ) ಜಾಮೀನು ಮಂಜೂರು ಮಾಡಿದೆ. ಐದು ಲಕ್ಷ ಬಾಂಡ್, ಒಬ್ಬ ಶ್ಯೂರಿಟಿ ಒದಗಿಸುವಂತೆ ಹೇಳಿ ನ್ಯಾ. ಜೆ ಪ್ರೀತ್ ಅವರಿದ್ದ ಪೀಠ ಷರತ್ತುಬದ್ಧ ಜಾಮೀನು ನೀಡಿದೆ. ಈ ಹಿಂದೆ ಶಿವರಾಜ್ ಎಂಬುವರ ಶ್ಯೂರಿಟಿ ಸಲ್ಲಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಪೀಠ ಸೆಕ್ಷನ್​ 354ಎ, 354ಡಿ, 506, 509 ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. ​​​ಹಾಗೆ ಮ್ಯಾಜಿಸ್ಟ್ರೇಟ್ ಕೋರ್ಟ್​ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದು ಎಂದು 42ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶೆ ಜೆ.ಪ್ರೀತ್ ಹೇಳಿದ್ದಾರೆ.

ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮತ್ತು ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಏಪ್ರಿಲ್​ 28 ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ನೇಮಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾಗಿರುವ ಸಂತ್ರಸ್ತೆಯ ಹೇಳಿಕೆ ಪಡೆಯಿತು. ಈ ವೇಳೆ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ ರೇವಣ್ಣ ಅವರ ಮೇಲೆ 376 ರಡಿ (ಅತ್ಯಾಚಾರ) ಸೆಕ್ಷನ್ ಅನ್ನು ಸಹ ಎಸ್‌ಐಟಿ ಸೇರಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಜಾಮೀನು ಮಂಜೂರು ಆಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 hour ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

4 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago