ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.
ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರ ವಿರುದ್ಧ ಬೊಟ್ಟು ಮಾಡಿದೆ.
ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು.. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ.
ಇದನ್ನೂ ಓದಿ : ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24
ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.
ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.
ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.
ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…