Featured

ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ : ಜೆಡಿಎಸ್ -Vishwanews24

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ??

ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ..

ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು..

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆರಂಭದಲ್ಲಿ ಲೈಂಗಿಕ ಹಗರಣ, ಲೈಂಗಿಕ ಶೋಷಣೆಯಂತೆ ಕಾಣುತ್ತಿದ್ದ ಸಿ.ಡಿ ಹಗರಣ ಈಗ ಷಡ್ಯಂತ್ರದಂತೆ ಕಾಣುತ್ತಿದೆ ಎಂದು ಜೆಡಿಎಸ್ ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಅನ್ನು ಪ್ರಶ್ನಿಸಿದೆ.

ಪ್ರಕರಣದಲ್ಲಿ @DKShivakumar ಮತ್ತು @siddaramaiah ಹೆಸರು ಕೇಳಿಬರುವ ಮೂಲಕ ಪ್ರಕರಣ ಈಗ ‘ಹನಿಟ್ರ್ಯಾಪ್‌’ ಸ್ವರೂಪ ಪಡೆದುಕೊಳ್ಳುತ್ತಿದೆ. ಇದೆಲ್ಲದರ ನಡುವೆ ರಾಷ್ಟ್ರದ ಎದುರು ನಾಚಿಕೆ ಪಡುವ ಸ್ಥಿತಿಯಲ್ಲಿ ರಾಜ್ಯ ನಿಂತಿದೆ ಎಂದು ಜೆಡಿಎಸ್ ಕಾಂಗ್ರೆಸ್ ನಾಯಕರ ವಿರುದ್ಧ ಬೊಟ್ಟು ಮಾಡಿದೆ.

ರಾತ್ರಿ ಒಂದು ಆಡಿಯೊ ಬಿಡುಗಡೆಯಾಗುವುದು, ಬೆಳಗ್ಗೆ ಅದಕ್ಕೊಂದು ಸ್ಪಷ್ಟನೆಯ ವಿಡಿಯೊ ಬಿಡುಗಡೆಯಾಗುವುದು.. ಇವೆಲ್ಲವನ್ನೂ ಗಮನಿಸುತ್ತಿದ್ದರೆ ಇದರ ಹಿಂದೆ ದೊಡ್ಡ ಕೂಟವೇ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ನೆಪದಲ್ಲಿ, ಆಕೆಯನ್ನು ಮುಂದಿಟ್ಟುಕೊಂಡು ಯಾರೋ ಆಟವಾಡುತ್ತಿರುವುದು ಸ್ಪಷ್ಟವಾಗುತ್ತಲಿದೆ.

ಇದನ್ನೂ ಓದಿ : ಡಿ.ಕೆ.ಶಿ ಹಾಗೇ ಮಾಡಿರಲಾರರು ಅಂದಿಕೊಂಡಿದ್ದೇನೆ : ಜೆ.ಸಿ.ಮಾಧುಸ್ವಾಮಿ -Vishwanews24

ಪ್ರಕರಣವನ್ನು ಅದರಪಾಡಿಗೆ ಬಿಟ್ಟು, ಆಗುವ ಬೆಳವಣಿಗೆಯನ್ನು ರಾಷ್ಟ್ರ ನೋಡಿ ಮನರಂಜನೆ ಪಡೆಯುವಂತೆ ಮಾಡುವುದು ರಾಜ್ಯಕ್ಕೆ, ನಮ್ಮ ಪೊಲೀಸರಿಗೆ ಮಾಡುವ ಅತಿ ದೊಡ್ಡ ಅಪಮಾನವಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸರು ದಿಟ್ಟತನ ಮೆರೆಯುವುದು ಅತ್ಯಗತ್ಯ. ಯಾವುದೇ ರಾಜಕೀಯ ಒತ್ತಡಗಳನ್ನೂ ಲೆಕ್ಕಿಸದೇ ತನಿಖೆ ನಡೆಸಿ ಅಸಲಿ ಸತ್ಯ ಬಯಲಿಗೆಳೆಯಬೇಕು.

ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪ್‌ ಆಗಿದೆಯೋ ಎಂಬ ಪ್ರಶ್ನೆಗಳು ಸಾರ್ವಜನಿಕರನ್ನು ಕಾಡುತ್ತಿವೆ. ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದನ್ನು ಲೆಕ್ಕಿಸದೇ ಅಸಲಿ ಸಂಗತಿಯನ್ನು ಪೊಲೀಸರು ಹೊರ ತರಬೇಕು. ರಾಜ್ಯದ ಪೊಲೀಸರ ಕರ್ತವ್ಯ ನಿಷ್ಠೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರಿದೆ. ಅದರ ಪ್ರದರ್ಶನಕ್ಕೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ.

ಲೈಂಗಿಕ ಪ್ರಕರಣವೊಂದರ ವರದಿಗಳು ನಿತ್ಯ ಪ್ರಕಟವಾಗುತ್ತಿದ್ದರೆ, ಅದರಿಂದ ಕುಟುಂಬಗಳು ಮತ್ತು ಮಕ್ಕಳ ಮೇಲೆ ಆಗುವ ಪರಿಣಾಮಗಳನ್ನು ನಾವು ಚಿಂತಿಸಬೇಕಿದೆ. ಇದಕ್ಕೆ ಅಂತ್ಯ ಹಾಡಬೇಕಿದ್ದರೆ ಸೂಕ್ತ ತನಿಖೆಯೊಂದೇ ದಾರಿ. ಇಲ್ಲವಾದರೆ, ಈ ಪ್ರಕರಣದ ಬೆಳವಣಿಗೆಗಳು ಮತ್ತಷ್ಟು ವಿಸ್ತಾರವಾಗುತ್ತ ನಾಗರಿಕ ಸಮಾಜ ನಾಚಿಕೆಯಲ್ಲಿ ದಿನ ಕಳೆಯಬೇಕಾಗುತ್ತದೆ.

ಇದನ್ನೂ ಓದಿ : ಉಡುಪಿ : ಗ್ರಾ.ಪಂ. ಉಪ ಚುನಾವಣೆ; ಸಂತೆ ಜಾತ್ರೆ ನಿಷೇಧ :ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

 

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

13 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

22 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

22 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

22 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago