ಸಿಡ್ನಿ: ಲೈಂಗಿನ ದೌರ್ಜನ್ಯ ಪ್ರಕರಣದಡಿಯಲ್ಲಿ ಸಿಲುಕಿ ಆಸ್ಟ್ರೇಲಿಯಾದಲ್ಲಿ ಪೊಲೀಸರ ಅತಿಥಿಯಾಗಿರುವ ಶ್ರೀಲಂಕಾ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಲಂಕಾ ಕ್ರಿಕೆಟ್ ನಿಂದ ಅಮಾನತು ಮಾಡಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿಯು ಈ ಬಗ್ಗೆ ಇಂದು ತೀರ್ಮಾನಿಸಿದೆ.
ತಕ್ಷಣವೇ ಜಾರಿಗೆ ಬರುವಂತೆ ರಾಷ್ಟ್ರೀಯ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲು ಮಂಡಳಿ ನಿರ್ಧರಿಸಿದೆ. ಅವರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ವರದಿ ತಿಳಿಸಿದೆ.
ಲಂಕಾದ ಕ್ರಿಕೆಟ್ ಆಟಗಾರ ದನುಷ್ಕಾ ಗುಣತಿಲಕ ಅವರನ್ನು ರವಿವಾರ ಬೆಳಗ್ಗೆ ಸಿಡ್ನಿ ಪೊಲೀಸರು ಟೀಂ ಹೋಟೆಲ್ ನಿಂದ ಬಂಧಿಸಿದ್ದರು. ಮಹಿಳೆಯೊಬ್ಬರಿಗೆ ಲೈಂಗಿಕವಾಗಿ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಗುಣತಿಲಕ ಬಂಧನವಾಗಿದೆ. ವಿಶ್ವಕಪ್ ನಿಂದ ಹೊರಬಿದ್ದಿರುವ ಲಂಕಾ ತಂಡವು ಗುಣತಿಲಕ ಅವರನ್ನು ಬಿಟ್ಟು ಶ್ರೀಲಂಕಾಗೆ ಪ್ರಯಾಣಿಸಿದೆ.
ಚಂದ್ರಗ್ರಹಣ – ಹಲವು ದೇವಾಲಯಗಳಲ್ಲಿ ಪ್ರವೇಶ ನಿರ್ಬಂಧ
ಗುಣತಿಲಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ಜಾಮೀನು ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ದನುಷ್ಕ ಗುಣತಿಲಕ ಮತ್ತು ಅತ್ಯಾಚಾರ ಆರೋಪ ಮಾಡಿರುವ ಮಹಿಳೆಯ ನಡುವೆ ಡೇಟಿಂಗ್ ಆಯಪ್ ವೊಂದರಲ್ಲಿ ಬಹಳ ದಿನಗಳಿಂದ ಮಾತುಕತೆ ನಡೆದಿದೆ. ನ.2ರಂದು ರೋಸ್ ಬೇನಲ್ಲಿರುವ ನಿವಾಸವೊಂದರಲ್ಲಿ ಇಬ್ಬರೂ ಒಟ್ಟಾಗಿದ್ದಾರೆ. ಆ ವೇಳೆ ಗುಣತಿಲಕ ತನ್ನನ್ನು ಅತ್ಯಾಚಾರ ಕ್ಕೊಳಪಡಿಸಿದ್ದಾರೆನ್ನುವುದು ಮಹಿಳೆಯ ಆರೋಪ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…