ಬೆಂಗಳೂರು: ಲೋಕಸಭಾ ಚುನಾವಣೆಗೆ ತಯಾರಿ ಆರಂಭವಾಗಿದ್ದು, 5 ಲೋಕಸಭಾ ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗಾಗಿ ಬಿಜೆಪಿ ಸರ್ವೇ ಕಾರ್ಯ ಆರಂಭಿಸಿದೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.
ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಕೊಡಲು ಹೈಕಮಾಂಡ್ ತಂತ್ರ ರೂಪಿಸಿದೆ. ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವರಿಷ್ಠರು ಸರ್ವೇ ನಡೆಸುತ್ತಿದ್ದಾರೆ. ಈ ಮೂಲಕ ಬೆಂಗಳೂರಿನ 2 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರದಲ್ಲಾದರೂ ಮಹಿಳೆಯರಿಗೆ ಟಿಕೆಟ್ ನೀಡುವ ಪ್ಲಾನ್ ಅನ್ನು ಬಿಜೆಪಿ (BJP) ಮಾಡಿಕೊಂಡಿದೆ.
ಇತ್ತ ಉತ್ತರ ಕನ್ನಡ ಹಾಗೂ ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿಯೂ ಸರ್ವೇ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾದಲ್ಲಿ ಹಾಲಿ ಸಂಸದೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಮತ್ತೊಮ್ಮೆ ಟಿಕೆಟ್ ಕೊಡಬೇಕಾ ಎನ್ನುವ ಬಗ್ಗೆಯೂ ಸರ್ವೇ ನಡೆಯುತ್ತಿದೆ ಎನ್ನಲಾಗಿದೆ.
ಒಟ್ಟಾರೆ ಕಾಂಗ್ರೆಸ್ ಗ್ಯಾರಂಟಿ ಅಸ್ತ್ರಕ್ಕೆ ಮಹಿಳಾ ಗ್ಯಾರಂಟಿ ಅಸ್ತ್ರ ಪ್ರಯೋಗ ಮಾಡಲು ಬಿಜೆಪಿ ಯೋಜನೆ ರೂಪಿಸಿಕೊಂಡಿದೆ. ಕನಿಷ್ಠ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಟಾರ್ ಮಹಿಳೆಯರೇ ಸ್ಪರ್ಧೆ ಮಾಡ್ತಾರಾ ಎನ್ನುವ ಪ್ರಶ್ನೆ ಮೂಡಿದೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…