Featured

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೋರಾಟಕ್ಕೆ ಸಿದ್ದರಾಮಯ್ಯ ಶಕ್ತಿ ಅತಿಮುಖ್ಯ..

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯನವರು ಕೇವಲ ಮಾಜಿ ಮುಖ್ಯಮಂತ್ರಿಗಳು ಮಾತ್ರವಲ್ಲ. ಅವರು ಬೇರೆ ಮಾಜಿ ಮುಖ್ಯಮಂತ್ರಿಗಳಿಂದ ಭಿನ್ನ. ಪ್ರಸ್ತುತ ರಾಜಕಾರಣದಲ್ಲಿ ಕಾಂಗ್ರೆಸ್ ಗೆ ಅವರ ಅನಿವಾರ್ಯತೆ ಸಾಕಷ್ಟಿದೆ. ಪಕ್ಷದ ಅತಿ ದೊಡ್ಡ ನಿರ್ಧಾರ ಮಾಡುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಅವರೇ ಈಗ ಉಸ್ತುವಾರಿ.

ಸಿದ್ದರಾಮಯ್ಯನವರ ರಾಜಕೀಯ ಅನುಭವ, ಅವರ ಸಾಮೂಹಿಕ ವರ್ಚಸ್ಸು, ದಲಿತ ಸಮುದಾಯದವರ ನಾಯಕ ಎಂಬ ಹಣೆಪಟ್ಟಿ, ವಿಧಾನಸಭೆ ಚುನಾವಣೆಗೆ ಮುನ್ನ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದು, ಪ್ರಧಾನಿ ಮೋದಿ ವಿರುದ್ಧವೇ ರಾಜಕೀಯ ಹೋರಾಟ, ಮೂಲ ಕಾಂಗ್ಗೆಸ್ಸಿಗರಲ್ಲ ಎಂಬ ಇಮೇಜ್ ಇವೆಲ್ಲವೂ ಸಿದ್ದರಾಮಯ್ಯನವರಿಗೆ ವರವಾಗಿದ್ದು ಇದರ ಫಲವೇ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅವರನ್ನು ಹೈಕಮಾಂಡ್ ಮುಖ್ಯವಾಹಿನಿಗೆ ತರಲಿಚ್ಛಿಸುತ್ತಿರುವುದು.

ಸಿದ್ದರಾಮಯ್ಯನವರು ಮೂಲ ಕಾಂಗ್ರೆಸ್ಸಿಗ ಅಲ್ಲ, ಹೊರಗಿನಿಂದ ಬಂದವರು ಎಂಬ ಮಾತು ಅವರ ರಾಜಕೀಯ ಜೀವನದಲ್ಲಿ ಅವರಿಗೆ ಟಾಂಗ್ ನೀಡುತ್ತಲೇ ಇತ್ತು. ಆದರೆ ಅದೇ ಮಾತು ಅವರಿಗೀಗ ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ವಿರುದ್ಧವಾಗಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದೇ ಹೇಳಲಾಗುತ್ತಿದೆ. ಕಾಂಗ್ರೆಸ್ಸೇತರ ಎಂಬ ಸಿದ್ದರಾಮಯ್ಯನವರ ಹಣೆಪಟ್ಟೆ ಅವರನ್ನು ಮುಂದಿನ ಚುನಾವಣೆಯಲ್ಲಿ ಇತರ ಬೇರೆ ಪಕ್ಷಗಳನ್ನು ಒಗ್ಗೂಡಿಸಿ ಬಿಜೆಪಿ ವಿರುದ್ಧ ಹೋರಾಡಲು ಪ್ರಮುಖ ಅಸ್ತ್ರ ಮಾಡಿಕೊಳ್ಳಬಹುದು ಎಂಬ ಲೆಕ್ಕಾಚಾರ ಕಾಂಗ್ರೆಸ್ ಹೈಕಮಾಂಡ್ ನದ್ದು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿನ ರಾಜಕೀಯ ಹೋರಾಟ ಸಿದ್ದರಾಮಯ್ಯ ವರ್ಸಸ್ ಮೋದಿಯವರ ಮಧ್ಯೆ ಏರ್ಪಟ್ಟಂತೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕೂಡ ಸಿದ್ದರಾಮಯ್ಯನವರನ್ನು ಮುಂದೆ ಇಟ್ಟುಕೊಂಡು ರಾಜಕೀಯ ಹೋರಾಟಕ್ಕೆ ಧುಮುಕುವ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಇದ್ದಂತಿದೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಈ ಮಾತನ್ನು ಒಪ್ಪುತ್ತಾರೆ. ಎಲ್ಲಾ ಪಕ್ಷಗಳಲ್ಲಿಯೂ ಸಿದ್ದರಾಮಯ್ಯನವರಿಗೆ ಆಪ್ತರು ಇದ್ದಾರೆ. ತೃತೀಯ ರಂಗ ರಾಷ್ಟ್ರೀಯ ಮಟ್ಟದಲ್ಲಿ ರಚನೆಯಾದರೆ ಅಲ್ಲಿ ಸಿದ್ದರಾಮಯ್ಯನವರು ಪ್ರಮುಖ ಪಾತ್ರ ವಹಿಸುತ್ತಾರೆ ಎನ್ನುತ್ತಾರೆ.ಆದರೆ ಕೆಲವು ರಾಜಕೀಯ ವಿಶ್ಲೇಷಕರು ಈ ಮಾತನ್ನು ಒಪ್ಪುವುದಿಲ್ಲ. ಸಿದ್ದರಾಮಯ್ಯನವರಿಗೆ ಎಲ್ಲಾ ಪಕ್ಷಗಳಲ್ಲಿ ಆಪ್ತರು ಇದ್ದಾರೆ ನಿಜ, ಆದರೆ ಅವರು ಪಕ್ಷವನ್ನು ನಿರ್ಧರಿಸುವವರು ಆಗುತ್ತಾರೆಯೇ ಎಂದು ಕೇಳುತ್ತಾರೆ ರಾಜಕೀಯ ತಜ್ಞ ಡಾ ಸಂದೀಪ್ ಶಾಸ್ತ್ರಿ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ ಸಿದ್ದರಾಮಯ್ಯನವರ ಸೇರ್ಪಡೆ ಕಾಂಗ್ರೆಸ್ ಗೆ ಕರ್ನಾಟಕ ಎಷ್ಟು ಅನಿವಾರ್ಯ ಎಂಬುದನ್ನು ತೋರಿಸುತ್ತದೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಹಿಂದುಳಿದ ನಾಯಕ ಸಿದ್ದರಾಮಯ್ಯನವರಿಗೆ ಸ್ಥಾನ ನೀಡಲಾಗುತ್ತಿದೆ. ಕಾಂಗ್ರೆಸ್ ಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿಯವರು ಮುಖ್ಯವಾಗುವುದಿಲ್ಲ. ಬಿಜೆಪಿ  ವಿರುದ್ಧ ಎಲ್ಲಾ ಪಕ್ಷಗಳ ಒಗ್ಗಟ್ಟನ್ನು ತೋರಿಸಲು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ವೇದಿಕೆಯಾಗಿತ್ತು.

ರಾಷ್ಟ್ರಮಟ್ಟದಲ್ಲಿ ಮಾಯಾವತಿ, ಲಾಲೂ ಪ್ರಸಾದ್ ಯಾದವ್, ಮುಲಾಯಂ ಸಿಂಗ್ ಯಾದವ್ ಮತ್ತು ಶರದ್ ಪವಾರ್ ಅವರ ಜೊತೆಗೆ ಸಿದ್ದರಾಮಯ್ಯನವರನ್ನು ದಲಿತ ಮುಖಂಡನಾಗಿ ಗುರುತಿಸಲು ಕಾಂಗ್ರೆಸ್ ಹೈಕಮಾಂಡ್ ಬಯಸಿದಂತಿದೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

11 hours ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

11 hours ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

12 hours ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

12 hours ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

1 day ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

1 day ago