ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಅನುಷ್ಠಾನ ಮಾಡುವುದಾಗಿ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿ ಅವರು ಛತ್ತೀಸಗಡದಲ್ಲಿ ಘೋಷಿಸಿದ್ದಾರೆ.
ಇದೊಂದು ಅಭೂತಪೂರ್ವ ಕ್ರಮವಾಗಲಿದೆ. ಜಗತ್ತಿನ ಯಾವ ದೇಶವೂ ಇಂತಹುದೊಂದು ಕಾರ್ಯಕ್ರಮವನ್ನು ಜಾರಿ ಮಾಡಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದರೆ ಈ ಯೋಜನೆಯನ್ನು ಜಾರಿಗೆ ತರಲಿದೆ’ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ.
ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ, ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ ಎಂದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…