Featured

ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ಜಯಗಳಿಸಲು ರಾಹುಲ್ ಗೆ ಪ್ರಧಾನಿ ಅಭ್ಯರ್ಥಿ ಘೋಷಣೆ ಇಲ್ಲ..

ಹೊಸದಿಲ್ಲಿ: ಮುಂಬರುವ ಲೋಕಸಭೆ ಚುನಾವಣೆ ಅಖಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂತು ಸೆಣಸುವ ಸಮರ್ಥ ಅಭ್ಯರ್ಥಿ ಪ್ರತಿಪಾಳಯದಲ್ಲಿ ಇಲ್ಲ ಎನ್ನುವ ದಟ್ಟ ಅಭಿಪ್ರಾಯದ ನಡುವೆಯೇ, ರಾಹುಲ್‌ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ಕಾಂಗ್ರೆಸ್‌ ನಿರಾಕರಿಸಿದೆ.

ಏಕಾಂಗಿಯಾಗಿ ಚುನಾವಣೆ ಎದುರಿಸಿ ಗೆಲ್ಲುವ ಕನಸನ್ನು ಎಂದೋ ಕೈಬಿಟ್ಟಿರುವ ಕಾಂಗ್ರೆಸ್‌, ಮಿತ್ರಪಕ್ಷಗಳನ್ನು ಒಗ್ಗೂಡಿಸಿ ಸೆಣಸುವ ಕನಸು ಕಾಣುತ್ತಿದೆ. ಆದರೆ ಆ ಪ್ರಯತ್ನ ಕೂಡ ಇದುವರೆಗೆ ನಿರೀಕ್ಷಿತ ಮಟ್ಟ ಮುಟ್ಟಿಲ್ಲ. ಇದರಿಂದ ಆತಂಕಗೊಂಡಿರುವ ಕಾಂಗ್ರೆಸ್‌, ಪ್ರಧಾನಿ ಪಟ್ಟದ ಗೊಡವೆಯಿಂದ ದೂರ ಉಳಿಯಲು ನಿರ್ಧರಿಸಿದೆ. 

ಸದ್ಯದ ಸ್ಥಿತಿಯಲ್ಲಿ ರಾಹುಲ್‌ ಗಾಂಧಿ ನಾಯಕತ್ವವೂ ಪಕ್ಷದೊಳಗೆ ಭರವಸೆ ಮೂಡಿಸುವಲ್ಲಿ ವಿಫಲವಾಗಿದೆ. ಮೋದಿ ಅಲೆಯ ಅಬ್ಬರ ಯಥಾಸ್ಥಿತಿ ಮುಂದುವರಿದಿರುವುದರಿಂದ ಪ್ರತಿಪಾಳಯದಲ್ಲಿ ಅವರಿಗೆ ತಕ್ಕ ಎದುರಾಳಿ ಬೇಕು. ರಾಹುಲ್‌ ಅವರಿಗೆ ಆ ವರ್ಚಸ್ಸು ಇಲ್ಲ ಎನ್ನುವುದು ಖುದ್ದು ಕಾಂಗ್ರೆಸ್‌ ನಾಯಕರೇ ಒಪ್ಪಿರುವ ವಾಸ್ತವ. ಈ ಬಗ್ಗೆ ಕೆಲವು ನಾಯಕರು ಪಕ್ಷದ ಕಾರ್ಯಕಾರಿಣಿ ಸಭೆ (ಸಿಡಬ್ಲ್ಯೂಸಿ)ಯಲ್ಲಿಯೇ ಸ್ಪಷ್ಟ ನಿರಾಕರಣೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

‘‘ನನಗೆ ಪ್ರಧಾನಿ ಪಟ್ಟದ ಆಸೆ ಇಲ್ಲ. ಮೈತ್ರಿಕೂಟದ ಸಮರ್ಥರೊಬ್ಬರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಒಪ್ಪಲು ನಾನು ಸಿದ್ಧ,’’ ಎಂದು ಖುದ್ದು ರಾಹುಲ್‌ ಅವರೇ ಕೆಲದಿನಗಳ ಹಿಂದೆ ಸ್ಪಷ್ಟಪಡಿಸಿದ್ದಾರೆ. 

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

18 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

18 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

19 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

21 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

22 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

22 hours ago