ಚೆನ್ನೈ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರೂ ಆಗಿರುವ ಪಿ ಚಿದಂಬರಂ ಹೇಳಿದ್ದಾರೆ.
ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕೆ ಮಿಶ್ರ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಹಲವು ಸಮಾನ ಮನಸ್ಕ ಮೈತ್ರಿ ಪಕ್ಷಗಳಿಂದ ನಮಗೆ ಬಂದಿವೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ. ಕೆಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಮಾತನಾಡುವಾಗ ಎಐಸಿಸಿ ಮಧ್ಯೆ ಪ್ರವೇಶಿಸಿ ಅಂತಹ ಹೇಳಿಕೆ ನೀಡುವುದು ನಿಲ್ಲಿಸುವಂತೆ ಸೂಚಿಸಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಅದನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಬಯಕೆಯಾಗಿದೆ. ಎನ್ ಡಿಎ ಜಾಗದಲ್ಲಿ ಜನಪರವಾದ, ವ್ಯಕ್ತಿಗಳಿಗೆ ಸ್ವಾತಂತ್ರ್ಯ ನೀಡುವ, ಪ್ರಗತಿಪರ ಸರ್ಕಾರವನ್ನು ನೋಡುವುದು ನಮ್ಮ ಆಸೆಯಾಗಿದೆ. ತೆರಿಗೆ ಭಯೋತ್ಪಾದನೆಯಂತಹ ವಾತಾವರಣವನ್ನು ಸೃಷ್ಟಿಸುವ ಸರ್ಕಾರ ನಮಗೆ ಬೇಡ. ಮಹಿಳೆಯರು, ಮಕ್ಕಳಿಗೆ ರಕ್ಷಣೆ ನೀಡುವ ರೈತರನ್ನು ಬೆಳೆಸುವ ಸರ್ಕಾರ ಬೇಕು ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ಜೊತೆ ಸ್ಥಳೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳದಂತೆ ನರೇಂದ್ರ ಮೋದಿ ಸರ್ಕಾರ ಬೆದರಿಕೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ ಆಪಾದಿಸಿದ್ದಾರೆ. ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂದು ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಿರ್ಧರಿಸಲಿದೆ ಎಂದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…