Featured

ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ.: ಪಿ. ಚಿದಂಬರಂ

ಚೆನ್ನೈ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ರಾಹುಲ್ ಗಾಂಧಿ ಅವರನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುವುದಿಲ್ಲ ಎಂದು ಮಾಜಿ ಹಣಕಾಸು ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ನಾಯಕರೂ ಆಗಿರುವ ಪಿ ಚಿದಂಬರಂ ಹೇಳಿದ್ದಾರೆ.

ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದಕ್ಕೆ ಮಿಶ್ರ ಹಾಗೂ ಋಣಾತ್ಮಕ ಪ್ರತಿಕ್ರಿಯೆ ಹಲವು ಸಮಾನ ಮನಸ್ಕ ಮೈತ್ರಿ ಪಕ್ಷಗಳಿಂದ ನಮಗೆ ಬಂದಿವೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಅಭ್ಯರ್ಥಿ ಎಂದು ನಾವೆಂದೂ ಹೇಳಿಕೊಂಡಿಲ್ಲ. ಕೆಲವು ಕಾಂಗ್ರೆಸ್ ನಾಯಕರು ಈ ಬಗ್ಗೆ ಮಾತನಾಡುವಾಗ ಎಐಸಿಸಿ ಮಧ್ಯೆ ಪ್ರವೇಶಿಸಿ ಅಂತಹ ಹೇಳಿಕೆ ನೀಡುವುದು ನಿಲ್ಲಿಸುವಂತೆ ಸೂಚಿಸಿತ್ತು. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು, ಅದನ್ನು ಅಧಿಕಾರದಿಂದ ಹೊರಗಿಡುವುದು ನಮ್ಮ ಬಯಕೆಯಾಗಿದೆ. ಎನ್ ಡಿಎ ಜಾಗದಲ್ಲಿ ಜನಪರವಾದ, ವ್ಯಕ್ತಿಗಳಿಗೆ ಸ್ವಾತಂತ್ರ್ಯ ನೀಡುವ, ಪ್ರಗತಿಪರ ಸರ್ಕಾರವನ್ನು ನೋಡುವುದು ನಮ್ಮ ಆಸೆಯಾಗಿದೆ. ತೆರಿಗೆ ಭಯೋತ್ಪಾದನೆಯಂತಹ ವಾತಾವರಣವನ್ನು ಸೃಷ್ಟಿಸುವ ಸರ್ಕಾರ ನಮಗೆ ಬೇಡ. ಮಹಿಳೆಯರು, ಮಕ್ಕಳಿಗೆ ರಕ್ಷಣೆ ನೀಡುವ ರೈತರನ್ನು ಬೆಳೆಸುವ ಸರ್ಕಾರ ಬೇಕು ಎಂದು ಸಂದರ್ಶನದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಜೊತೆ ಸ್ಥಳೀಯ ಪಕ್ಷಗಳು ಮೈತ್ರಿ ಮಾಡಿಕೊಳ್ಳದಂತೆ ನರೇಂದ್ರ ಮೋದಿ ಸರ್ಕಾರ ಬೆದರಿಕೆ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದೆ ಎಂದು ಇದೇ ಸಂದರ್ಭದಲ್ಲಿ  ಆಪಾದಿಸಿದ್ದಾರೆ. ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ. ಮೈತ್ರಿ ಮಾಡಿಕೊಂಡು ಚುನಾವಣೆ ನಂತರ ಪ್ರಧಾನ ಮಂತ್ರಿ ಯಾರಾಗಬೇಕು ಎಂದು ಎಲ್ಲಾ ಪಕ್ಷಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಿ ನಿರ್ಧರಿಸಲಿದೆ ಎಂದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago