ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ : ಆರ್. ಅಶೋಕ್ ಗೆ ಅಮಿತ್ ಶಾ ಅಭಿನಂದನಾ ಪತ್ರ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಅವರು ಪಕ್ಷದವತಿಯಿಂದ ಗೌರವ ಅಭಿನಂದನೆ ಪತ್ರವನ್ನು ಬಿಜೆಪಿ. ನಾಯಕ ಆರ್. ಅಶೋಕ ಅವರನ್ನು ಉದ್ದೇಶಿಸಿ ಬರೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಬಿಜೆಪಿ ಅಭೂತಪೂರ್ವ ಗೆಲುವು ಪಡೆದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್ ಲೋಕಸಭಾ ಚುನಾವಣೆಯಲ್ಲಿ ಶ್ರಮಪಟ್ಟು ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ ಎಂದು ಕೊಂಡಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ದೊರೆತು 303 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೇವೆ. ಚುನಾವಣೆ ಕಾರ್ಯದಲ್ಲಿ ನಮ್ಮ ಅಳಿಲು ಸೇವೆಯನ್ನು ಶ್ಲಾಘಿಸಿ ಪಕ್ಷದ ರಾಷ್ಟ್ರಾಧ್ಯಕ್ಷರಾದ ಅಮಿತ್ ಶಾ ಅವರು ನಮಗೆ ಅಭಿನಂದನಾ ಪತ್ರ ಕಳುಹಿಸಿರುವುದು ಹರ್ಷ ತಂದಿದೆ.

ಈ ಅಭಿನಂದನೆ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಅಲ್ಲದೇ ರಾಜ್ಯದಲ್ಲೂ ಕೂಡ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬೆನ್ನಲ್ಲೆ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಸಂಘಟನೆ, ಕಾರ್ಯ ವೈಖರಿಯಿಂದಲೇ 2014ರ ಲೋಕಸಭಾ ಚುನಾವಣೆಗಿಂತ ಹೆಚ್ಚು ಸ್ಥಾನ ಗೆಲ್ಲಲು ಸಹಾಯಕವಾಗಿದೆ. ಮುಂದಿನ ದಿನಗಳಲ್ಲೂ ಕೂಡ ಇದೇ ರೀತಿ ಪಕ್ಷ ಸಂಘಟನೆ ಮಾಡಬೇಕೆಂದು ಅಮಿತ್ ಶಾ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.

ಸದ್ಯ ಈ ಪತ್ರಕ್ಕೆ ಸಂಭ್ರಮ ವ್ಯಕ್ತಪಡಿಸಿರುವ ಆರ್.ಅಶೋಕ್ ಅವರು, ಅಮಿತ್ ಶಾ ಹೇಳಿರುವ ಅಭಿನಂದನೆ ಲಕ್ಷಾಂತರ ಕಾರ್ಯಕರ್ತರಿಗೆ ಸಲ್ಲತಕ್ಕದ್ದು ಎಂದು ಪ್ರತಿಕ್ರಿಯೆ ನೀಡಿದ್ದು ಈ ವಿಷಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.