ದಕ್ಷಿಣ ಕನ್ನಡ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸುತ್ತಿರುವ ರಮಾನಾಥ ರೈ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಸ್ತುವಾರಿ ಸಚಿವ, ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ ಬೆಳ್ಳಿಪ್ಪಾಡಿ ರಮಾನಾಥ ರೈ ಇದೀಗ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಬಹುತೇಕ ವಿಶ್ರಾಂತ ಜೀವನ ನಡೆಸುತ್ತಿರುವ ರಮಾನಾಥ ರೈ ಇದೀಗ ಮತ್ತೆ ರಾಜಕೀಯದಲ್ಲಿ ಸಕ್ರಿಯರಾಗುವ ಮುನ್ಸೂಚನೆ ನೀಡುತ್ತಿದ್ದಾರೆ.ಮುಂಜಾನೆ ಸರ್ಕ್ಯೂಟ್ ಹೌಸ್ ನಲ್ಲಿ ಬೀಡುಬಿಟ್ಟು ಮುಂಬರುವ ಲೋಕಸಭಾ ಚುನಾವಣೆಗೆ ತಂತ್ರಗಾರಿಕೆ ರೂಪಿಸುತ್ತಿದ್ದಾರೆ.ಕೆಲ ದಿನಗಳ ಹಿಂದೆಯಷ್ಟೇ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ರಮಾನಾಥ ರೈ ಅವರು ನಾನು ಕೂಡ ಟಿಕೆಟ್ ಆಕಾಂಕ್ಷಿ ಎಂಬ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದ್ದಾರೆ.

ಮಂಗಳೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಹೈಕಮಾಂಡಿಗೆ ಸೂಕ್ತ ಅಭ್ಯರ್ಥಿಯಾಗಿ ಕಂಡಿರುವುದು ಮಾಜಿ ಸಚಿವ ರಮಾನಾಥ ರೈ ಮಾತ್ರ. ಈ ಹಿಂದೆ ಕಣಕ್ಕಿಳಿದಿದ್ದ ಜನಾರ್ದನ ಪೂಜಾರಿ ನಳಿನ್ ಕುಮಾರ್ ವಿರುದ್ಧ ಭಾರೀ ಮತಗಳ ಅಂತರದಲ್ಲಿ ಸೋಲು ಕಂಡಿದ್ದರಿಂದ ಮತ್ತೆ ಗೆಲುವನ್ನು ತಮ್ಮದಾಗಿಸಿಕೊಳ್ಳುವ ಅಜೆಂಡಾ ಹಾಕಿರುವ ಕಾಂಗ್ರೆಸ್ ಪಕ್ಷ ರಮಾನಾಥ ರೈಯತ್ತ ಒಲವು ತೋರಿಸಿದೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಕೋಟೆಯನ್ನು ಒಡೆದು ಕಾಂಗ್ರೆಸ್ ತನ್ನ ಝಂಡಾ ಊರಲು ಸಿದ್ಧತೆ ನಡೆಸಿದೆ. 1991ರಿಂದ ಅದು ಸಾಧ್ಯವಾಗಿಲ್ಲ. 1977ರಿಂದ 1989ರವರೆಗೆ ಈ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿ ಜನಾರ್ದನ ಪೂಜಾರಿ ಸತತವಾಗಿ ಜಯ ಗಳಿಸಿ ಕಾಂಗ್ರೆಸ್ಸಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭದ್ರ ಬುನಾದಿ ಹಾಕಿದ್ದರು. 1991ರ ಬಳಿಕ ಕಾಂಗ್ರೆಸ್ಸಿಗೆ ಸತತ ಸೋಲು. 1991ರ ಬಳಿಕ ಹಿಂದುತ್ವದ ಅಲೆಯಿಂದ ಚಿತ್ರಣವೇ ಬದಲಾಯಿತು. 1991ರ ಬಳಿಕ ಈ ಕ್ಷೇತ್ರ ಬಿಜೆಪಿ ವಶವಾಯಿತು.

ಮತ್ತೆ ಕಾಂಗ್ರೆಸ್ ವಯೋಸಹಜ ವೃದ್ಧಾಪ್ಯದಿಂದ ಬಳಲುತ್ತಿರುವ ಜನಾರ್ದನ ಪೂಜಾರಿಯವರಿಗೆ ಟಿಕೆಟ್ ನೀಡುವುದು ಕಷ್ಟ ಸಾಧ್ಯವಾಗಿರುವುದರಿಂದ ಸಹಜವಾಗಿಯೇ ರಮಾನಾಥ ರೈ ಈ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಇವರಲ್ಲದೇ ಇನ್ನೂ ಹಲವು ಮಂದಿ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತರಾಗಿದ್ದಾರೆ.ಮುಲ್ಕಿ-ಮೂಡುಬಿದಿರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಯುವ ನಾಯಕ ಮಿಥುನ್ ರೈ, ರಾಜ್ಯ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕೂಡಾ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ರಮಾನಾಥ ರೈ ಬಹಿರಂಗವಾಗಿಯೇ ತಾವು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಪಕ್ಷ ಈಗಾಗಲೇ ಪಾರ್ಲಿಮೆಂಟ್ ಚುನಾವಣೆಗೆ ಸಿದ್ಧವಾಗುತ್ತಿದ್ದು ಟಿಕೆಟ್ ನೀಡಿದರೆ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಆದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಅನ್ನೊದನ್ನು ಕಾದು ನೋಡಬೇಕಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

6 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

6 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

6 days ago