Featured

ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧ: ಯೋಗಿ ಆದಿತ್ಯನಾಥ್

ಲಕ್ನೋ: ಮುಂಬರುವ ಲೋಕಸಭಾ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣ ಮಾಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಸೋಮವಾರ ಅಯೋಧ್ಯೆಯಲ್ಲಿ ನಡೆದ `ಸಂತ ಸಮ್ಮೇಳನದಲ್ಲಿ’ ಪಾಲ್ಗೊಂಡ ಅವರು, 2019ರ ಲೋಕಸಭಾ ಚುನಾವಣೆಯೊಳಗೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತದೆ. ನಾವು ಪ್ರಪಂಚದಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿದ್ದು, ನ್ಯಾಯಾಂಗ, ಶಾಸಕಾಂಗ ತಮ್ಮದೇ ಆದ ಅಧಿಕಾರವನ್ನು ಹೊಂದಿವೆ. ಆದ್ದರಿಂದ ಇವುಗಳನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಚುನಾವಣೆಯೊಳಗೆ ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ. ಸಾಧು-ಸಂತರು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡಿ ಎಂದು ಹೇಳಿದ್ದಾರೆ.

ಮರ್ಯಾದಾ ಪುರುಷೋತ್ತಮ ಶ್ರೀರಾಮ ಬ್ರಹ್ಮಾಂಡದ ಒಡೆಯನಾಗಿದ್ದಾನೆ. ಅವನ ದಯೆಯಿಂದ ಅಯೋಧ್ಯೆಯಲ್ಲಿ ರಾಮಮಂದಿರ ಶತಸಿದ್ಧ. ಇದರ ಬಗ್ಗೆ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ಸಾಧು-ಸಂತರಲ್ಲಿ ಅನುಮಾನವಿದ್ದು, ಪ್ರಪಂಚವು ಆಶಾವಾದದ ಮೇಲೆ ನಿಂತಿದೆ. ಆದ್ದರಿಂದ ಎಲ್ಲರೂ ಸ್ವಲ್ಪ ಸಮಯದವರೆಗೆ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬಿಜೆಪಿಯ ಮಾಜಿ ಸಂಸದ ರಾಮ್ ವಿಲಾಸ್ ವೆಂದಾತಿಯವರು ಹೇಳಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಅವರು, ಮೊಗಲ್ ಚಕ್ರವರ್ತಿ ಬಾಬರನು ಯಾವುದೇ ಹಿಂದೂ ದೇವಾಲಯಗಳನ್ನು ಕೆಡವಲು ಯಾವ ನ್ಯಾಯಾಲಯಗಳ ಅಪ್ಪಣೆ ಕೇಳಿದ್ದಿಲ್ಲ. ಹೀಗಾಗಿ ನ್ಯಾಯಾಲಯದ ಅಪ್ಪಣೆ ಕೇಳದೆ 1992ರಲ್ಲಿ ಬಾಬ್ರಿ ಮಸೀದಿಯನ್ನು ಒಡೆದು ಹಾಕಲಾಗಿದೆ. ಅಲ್ಲದೇ ಸ್ಥಳದಲ್ಲಿ ಸಿಕ್ಕ ರಾಮನ ಮೂರ್ತಿಯಿಂದ ಪ್ರೇರೇಪಣೆಗೊಂಡು ಒಂದೇ ದಿನದಲ್ಲಿ ದೇವಾಲಯ ನಿರ್ಮಾಣಕ್ಕೆ ಮುಂದಾದ ವಿಚಾರವನ್ನು ಪ್ರಸ್ತಾಪಿಸಿದ್ರು.

ಇದೇ ವೇಳೆ ವಿಶ್ವ ಹಿಂದೂ ಪರಿಷತ್ ರಾಮ ಮಂದಿರ ನಿರ್ಮಾಣ ಕುರಿತು ಪ್ರಸ್ತಾಪಿಸಿ, ಮುಂದಿನ ಮೂರ್ನಾಲ್ಕು ತಿಂಗಳುಗಳಲ್ಲಿ ರಾಮ ಮಂದಿರ ವಿಚಾರವಾಗಿ ಸುಪ್ರೀಂ ಕೋರ್ಟ್ ಯಾವುದೇ ತೀರ್ಮಾನ ತೆಗೆದುಕೊಳ್ಳದಿದ್ದರೆ, ಭವಿಷ್ಯದ ಉಳಿವಿಗಾಗಿ ಮತ್ತೊಮ್ಮೆ ರಾಮಮಂದಿರ ನಿರ್ಮಾಣ ಚಳುವಳಿಯನ್ನು ಪ್ರಾರಂಭಿಸಬೇಕೆಂದು ಸಾಧು-ಸಂತರಿಗೆ ಕರೆ ನೀಡಿದ್ರು. ಇದೇ ಗುರುವಾರ ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ಮುಂದುವರೆಯಲಿದೆ. ಈ ಮೊದಲು ನಡೆದ ವಿಚಾರಣೆಯಲ್ಲಿ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಶಂಕೆ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಮುಖಂಡರುಗಳಾದ ಎಲ್.ಕೆ ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾ ಭಾರತಿ, ಕಲ್ಯಾಣ್ ಸಿಂಗ್ ಹಾಗೂ ಇನ್ನೂ ಅನೇಕ ಮುಖಂಡರನ್ನು ಕೋರ್ಟ್ ವಿಚಾರಣೆ ನಡೆಸಿತ್ತು.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

12 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

12 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

13 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

15 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

15 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

15 hours ago