Featured

ಲೋಕಸಭಾ ಚುನಾವಣೆ: ಅಮೇಥಿಯಲ್ಲಿ ರಾಹುಲ್ ಸೋತರೆ ರಾಜಕೀಯದಿಂದ ನಿವೃತ್ತಿ : ನವಜೋತ್ ಸಿಂಗ್ ಸಿಧು -Vishwanews24

ಲಕ್ನೋ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿಗೆ ಹಿನ್ನಡೆಯಾದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಕ್ರಿಕೆಟಿಗ, ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿಯವರಿಂದ ರಾಷ್ಟ್ರೀಯತೆಯ ಪಾಠವನ್ನು ಕಲಿಯಬೇಕು ಎಂದು ತಿಳಿಸಿದ್ದಾರೆ.

ಅಂದು ಪ್ರಧಾನಿಯಾಗಿದ್ದ ರಾಜೀವ್​ ಗಾಂಧಿಯವರ ಹತ್ಯೆಯ ಬಳಿಕ ಕಾಂಗ್ರೆಸ್​ನ್ನು ಮುನ್ನಡೆಸಿದ ಸೋನಿಯಾ ಗಾಂಧಿಯವರನ್ನು ಹೊಗಳಿದ ಸಿಧು, ಸೋನಿಯಾ ಗಾಂಧಿಯವರಿಂದಾಗಿಯೇ ಕೇಂದ್ರದಲ್ಲಿ ಕಾಂಗ್ರೆಸ್​ ಮತ್ತೆ 10 ವರ್ಷ ಆಡಳಿತ ನಡೆಸಲು ಸಾಧ್ಯವಾಯಿತು ಎಂದರು.

70 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್​ ಯಾವುದೇ ಅಭಿವೃದ್ಧಿ ನಡೆಸಿಲ್ಲ ಎಂದು ಪದೇಪದೆ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಹರಿಹಾಯ್ದರು. ಒಂದು ಚಿಕ್ಕ ಸೂಜಿಯಿಂದ, ವಿಮಾನದವರೆಗಿನಷ್ಟು ಅಭಿವೃದ್ಧಿಯನ್ನು ಕಾಂಗ್ರೆಸ್​ ಅವಧಿಯಲ್ಲೇ ಮಾಡಲಾಗಿದೆ ಎಂದು ಹೇಳಿದರು.

ರಫೇಲ್ ಯುದ್ಧ ವಿಮಾನ ವಿವಾದವೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ಸೋಲಿಗೆ ಕಾರಣವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

17 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

19 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

20 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

20 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

20 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

20 hours ago