Featured

ಲೋಕಸಭಾ ಚುನಾವಣೆ – ಉಡುಪಿಗೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ? Vishwanews24

ಲೋಕಸಭಾ ಚುನಾವಣೆ – ಉಡುಪಿಗೆ ಬಿಜೆಪಿಯಿಂದ ಅಚ್ಚರಿಯ ಅಭ್ಯರ್ಥಿ?

ಬೆಂಗಳೂರು:ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಮಾಡಲು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ರಾಜ್ಯದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಸದ್ಯದಲ್ಲೇ  ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಇನ್ನು ರಾಜ್ಯದಲ್ಲಿ ಹೆಚ್ಚು ಕುತೂಹಲ ಕೆರಳಿಸಿರುವ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಸಂಸದೆ ಶೋಭಾ ಕರಂದ್ಲಾಜೆ ರೆಡಿಯಾಗಿದ್ದಾರೆ.. ಇದರ ನಡುವೆ ಗೋ ಬ್ಯಾಕ್ ಶೋಭಾ ಅಭಿಯಾನದ ಮೂಲಕ ಶೋಭಾ ವಿರುದ್ಧ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಇದರಿಂದ ಶೋಭಾಗೆ ವಿರೋಧಿಗಳ ಬಿಸಿ ತಟ್ಟಿದೆ.

ಮತ್ತೊಂದೆಡೆ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿರುವ ಪ್ರಮೋದ್ ಮಧ್ವರಾಜ್ ಕೂಡಾ ಟಿಕೆಟ್ ನನಗೆ ಸಿಗಲಿದೆ ಎಂಬ ಭರವಸೆಯಲ್ಲಿ ಇದ್ದಾರೆ.ಇತ್ತ ಚಿಕ್ಕಮಗಳೂರಿನಲ್ಲಿ ವಿಧಾನಸಭೆಯಲ್ಲಿ ಸೋತಿರುವ ಸಿ.ಟಿ ರವಿ ಕೂಡಾ ಸ್ವಕ್ಷೇತ್ರದಲ್ಲಿ ಲೋಕಸಭೆಗೆ ಸ್ಪರ್ಧಿಸುವ ಹುಮ್ಮಸ್ಸಿನಿಂದ ಇದ್ದಾರೆ.

ಈ ನಡುವೆ ಬಿಜೆಪಿ ಹೈಕಮಾಂಡ್‌ ಅಚ್ಚರಿಯ ಅಭ್ಯರ್ಥಿಗೆ ಮಣೆ ಹಾಕಲಿದೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್‌ ಕೊಟ್ಟು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ-ಚಿಕ್ಕಮಗಳೂರಿನಲ್ಲಿ ಕಣಕ್ಕಿಳಿಸಬಹುದು ಎಂದು ಸುದ್ದಿಇದೆ. ಅದೇನೇ ಇರಲಿ ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳ ಚಿತ್ರಣ ಹೊರ ಬೀಳಲಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago