ಬೆಂಗಳೂರು:ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ ಮಾಡಲು ರಾಜಕೀಯ ಪಕ್ಷಗಳು ಹರಸಾಹಸ ಪಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ರಾಜ್ಯದ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಸದ್ಯದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಹೆಚ್ಚು ಕುತೂಹಲ ಕೆರಳಿಸಿರುವ ಉಡುಪಿ -ಚಿಕ್ಕಮಗಳೂರು ಕ್ಷೇತ್ರದಿಂದ ಮತ್ತೊಮ್ಮೆ ಸ್ಪರ್ಧಿಸಲು ಸಂಸದೆ ಶೋಭಾ ಕರಂದ್ಲಾಜೆ ರೆಡಿಯಾಗಿದ್ದಾರೆ.. ಇದರ ನಡುವೆ ಗೋ ಬ್ಯಾಕ್ ಶೋಭಾ ಅಭಿಯಾನದ ಮೂಲಕ ಶೋಭಾ ವಿರುದ್ಧ ವಿರೋಧ ಕೂಡ ವ್ಯಕ್ತವಾಗುತ್ತಿದೆ. ಇದರಿಂದ ಶೋಭಾಗೆ ವಿರೋಧಿಗಳ ಬಿಸಿ ತಟ್ಟಿದೆ.
ಮತ್ತೊಂದೆಡೆ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿರುವ ಪ್ರಮೋದ್ ಮಧ್ವರಾಜ್ ಕೂಡಾ ಟಿಕೆಟ್ ನನಗೆ ಸಿಗಲಿದೆ ಎಂಬ ಭರವಸೆಯಲ್ಲಿ ಇದ್ದಾರೆ.ಇತ್ತ ಚಿಕ್ಕಮಗಳೂರಿನಲ್ಲಿ ವಿಧಾನಸಭೆಯಲ್ಲಿ ಸೋತಿರುವ ಸಿ.ಟಿ ರವಿ ಕೂಡಾ ಸ್ವಕ್ಷೇತ್ರದಲ್ಲಿ ಲೋಕಸಭೆಗೆ ಸ್ಪರ್ಧಿಸುವ ಹುಮ್ಮಸ್ಸಿನಿಂದ ಇದ್ದಾರೆ.
ಈ ನಡುವೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಅಭ್ಯರ್ಥಿಗೆ ಮಣೆ ಹಾಕಲಿದೆ ಎನ್ನಲಾಗಿದೆ. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.
ಕರಂದ್ಲಾಜೆ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಟಿಕೆಟ್ ಕೊಟ್ಟು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಡುಪಿ-ಚಿಕ್ಕಮಗಳೂರಿನಲ್ಲಿ ಕಣಕ್ಕಿಳಿಸಬಹುದು ಎಂದು ಸುದ್ದಿಇದೆ. ಅದೇನೇ ಇರಲಿ ಇನ್ನೆರಡು ದಿನದಲ್ಲಿ ಅಭ್ಯರ್ಥಿಗಳ ಚಿತ್ರಣ ಹೊರ ಬೀಳಲಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…