ಲೋಕಸಭಾ ಚುನಾವಣೆ : ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಲಿ ಎಂದು ದೇವರ ಮೊರೆ ಹೋದ ಬಿಜೆಪಿ ಕಾರ್ಯಕರ್ತರು – Vishwanews24
ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕು, ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಹಾಗೂ ಹೆಗ್ಡೆ ಬೆಂಬಲಿಗರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಮಾ.14 ರ ಗುರುವಾರ ಪ್ರಾರ್ಥನೆ ಸಲ್ಲಿಸಿದ್ದಾರೆ.
ಬಿಜೆಪಿಯಲ್ಲಿರುವ ಹಿರಿಯ ನಾಯಕ ಜಯಪ್ರಕಾಶ್ ಹೆಗ್ಡೆಯವರು ಜೆಡಿಎಸ್ ಮೂಲಕ ಮೈತ್ರಿ ಅಭ್ಯರ್ಥಿ ಆಗಬಹುದು ಅನ್ನೋದು ರಾಜಕೀಯ ಲೆಕ್ಕಾಚಾರ. ‘ಬಿಜೆಪಿ ಟಿಕೆಟ್ ಸಿಗದೇ ಹೋದ್ರೂ ನಾನು ಪಕ್ಷ ಬಿಡಲ್ಲ’ ಎಂದು ಹೆಗ್ಡೆ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಸಂಭವನೀಯ ಅಭ್ಯರ್ಥಿಯಾಗಿರುವುದರಿಂದ ಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗುತ್ತಿದ್ದು, ಹಾಲಿ ಸಂಸದೆಯ ವಿರುದ್ಧ ಆಕ್ರೋಶಗೊಂಡಿರುವ ಬಿಜೆಪಿಯ ಕಾರ್ಯಕರ್ತರು ದೇವರ ಮೊರೆ ಹೋಗಿದ್ದಾರೆ. ಜನರ ಜೊತೆಯಿರುವ ನಾಯಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಬೇಕು ಎಂದು ಕಾರ್ಯಕರ್ತರು ಬಿಜೆಪಿ ಹೈಕಮಾಂಡ್‌ಗೆ ಆಗ್ರಹಿಸಿದ್ದಾರೆ.
