ಮಂಗಳೂರು, :ಲೋಕಸಭಾ ಚುನಾವಣೆಯಲ್ಲಿ ಎನ್‍ಡಿಎ ಬಹುಮತ ಸಾಧಿಸಿದರೆ ಗ್ರಾಮ ಗ್ರಾಮಗಳಲ್ಲಿ ಬಜರಂಗದಳವನ್ನು ಆರಂಭಿಸಲಾಗುವುದೆಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.
ಪುತ್ತೂರಿನಲ್ಲಿ ಆಯೋಜಿಸಲಾಗಿದ್ದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೂಡ ಮೋದಿಯ ಕುರಿತು ಮಾತನಾಡುತ್ತಿದ್ದಾರೆ. ಈ ಮೂಲಕ ಮೋದಿ ಅವರ ಸಾಮರ್ಥ್ಯ ಅನಾವರಣಗೊಂಡಿದೆ ಎಂದು ಹೇಳಿದರು.
ಏಪ್ರಿಲ್ 13 ರ ಮೋದಿ ಕಾರ್ಯಕ್ರಮಕ್ಕೆ ಮಂಗಳೂರಿನಲ್ಲಿ ಚಪ್ಪರ ಮುಹೂರ್ತ ಬಿಜೆಪಿ ಪಕ್ಷವು ಯಾವುದೇ ಜಾತಿಗೆ ಸೀಮಿತವಾಗಿ ಯೋಚನೆ ಮಾಡದೆ ಎಲ್ಲಾ ಜಾತಿಯವರನ್ನು ಗೌರವಿಸುತ್ತದೆ ಹಾಗೂ ಪ್ರೀತಿಸುತ್ತದೆ. ರಾಷ್ಟ್ರದ ಏಳಿಗೆ, ಹಿಂದುತ್ವ ಹಾಗೂ ಅಭಿವೃದ್ಧಿಗಾಗಿ ನಾಡಿನ ಜನತೆ ಮೋದಿಯನ್ನು ಬಯಸಿದ್ದಾರೆ ಎಂದು ಸುನೀಲ್ ಕುಮಾರ್ ತಿಳಿಸಿದರು.
ಕಾಂಗ್ರೆಸ್ ಮುಖಂಡರು ನಮ್ಮನ್ನು ಮೋದಿಯ ಹೆಸರು ಹೇಳಿ ಮತ ಕೇಳುತ್ತಿದ್ದೇವೆ ಎಂದು ಟೀಕಿಸುತ್ತಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ಮುಖಂಡರು ರಾಹುಲ್ ಗಾಂಧಿಯನ್ನು ಪ್ರಧಾನಿ ಎಂದು ಘೋಷಿಸಲಿ ಎಂದು ಸವಾಲು ಹಾಕಿದರು.
ಪ್ರಧಾನಿ ನರೇಂದ್ರ ಮೋದಿ, ಅವರು ಏಪ್ರಿಲ್ 13ರಂದು ಮಂಗಳೂರಿಗೆ ಆಗಮಿಸಲಿದ್ದು, ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಈ ಸಭೆಗೆ 1 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸಲಿದ್ದಾರೆ ಎಂದು ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…