ಹಾಸನ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಮಗೆ ಕನಿಷ್ಠ 12 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬುದು ನಮ್ಮ ಬಯಕೆ. ಒಂದು ವೇಳೆ ನೀಡದಿದ್ದರೆ ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧರಿದ್ದೇವೆ ಎಂದು ಲೋಕೋಪಯೋಗಿ ಸಚಿವ, ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಲೋಕಸಭಾ ಚುನಾವಣಾ ಮೈತ್ರಿ ಮಾಡಿಕೊಳ್ಳಬೇಕು ಎಂಬುದೂ ನಮ್ಮ ಆಶಯವಾಗಿದೆ ಎಂದರು. ಜತೆಗೆ ತ್ರಿಕೋನ ಸ್ಪರ್ಧೆ ಎದುರಾದರೂ ಜೆಡಿಎಸ್ ಸೆಣಸಾಟ ಮಾಡಲಿದೆ ಎಂದರು.
ಕಾಂಗ್ರೆಸ್ – ಜೆಡಿಎಸ್ ಮೈತ್ರಿಯಾದರೆ ರಾಜ್ಯದ 28 ಕ್ಷೇತ್ರಗಳಲ್ಲೂ ಮೈತ್ರಿ ಕೂಟದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಇದೆ. ಎಚ್‌ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಜನತಾದಳ 18 ಲೋಕಸಭಾ ಕ್ಷೇತ್ರಗಳನ್ನು ಗೆದ್ದಿರುವ ಉದಾಹರಣೆ ಇದೆ ಎಂದೂ ಅವರು ನೆನಪಿಸಿದರು. ಈಗಲೂ ಅದೇ ಸಾಧನೆ ಮಾಡಲಿದ್ದೇವೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…