ಹೆಚ್ಚು ಸ್ಥಾನ ಗೆದ್ದರೆ ಗ್ಯಾರಂಟಿ ಮುಂದುವರಿಸುತ್ತಾರೆ
ಹಾಸನ: 2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಹೊಸ ಬಾಂಬ್ ಸಿಡಿಸಿದ್ದಾರೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತದೆ. ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೇ, 5 ವರ್ಷ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಚುನಾವಣೆಗೂ ಮೊದಲು 5 ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಸಿದ್ದರಾಮಯ್ಯ ಅವರು 5 ಗ್ಯಾರಂಟಿಗಳನ್ನ ಜಾರಿಗೊಳಿಸಿದ್ದಾರೆ. ಮತ್ತೊಮ್ಮೆ ನುಡಿದಂತೆ ನಡೆಯುವುದಾಗಿ ಸಾಬೀತು ಮಾಡಿದ್ದಾರೆ ಎಂದು ತಂದೆಯನ್ನು ಕೊಂಡಾಡಿದ್ದಾರೆ.
ಹೆಚ್ಚು ಸ್ಥಾನ ಗೆದ್ದರೆ ಮತ್ತಷ್ಟು ಬಲ:
ಬಡವರಿಗಾಗಿ, ಶೋಷತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಪಕ್ಷಕ್ಕೆ ಇದೆ. ಹಾಗಾಗಿ ಸಿದ್ದರಾಮಯ್ಯ ಅವರಿಗೆ ನಿಮ್ಮ ಬೆಂಬಲ ನೀಡಬೇಕು. ಮುಂದೆ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ ಎದುರಿಸಬೇಕಾಗಿದೆ. ಹೆಚ್ಚು ಸ್ಥಾನಗಳನ್ನು ಗೆದ್ದರೆ ನೈತಿಕವಾಗಿ ಅವರಿಗೆ ಮತ್ತಷ್ಟು ಬೆಂಬಲ ಸಿಗುತ್ತೆ. ಗ್ಯಾರಂಟಿ ಯೋಜನೆಗೆ ವರ್ಷಕ್ಕೆ 56 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಹಿಂದೆ ಸಾಮಾಜಿಕ ಕಾರ್ಯಕ್ರಮಕ್ಕಾಗಿ ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟೊಂದು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು ಎಂದು ಮನವಿ ಮಾಡಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…