ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ – Vishwanews24

Featured, ದಕ್ಷಿಣ ಕನ್ನಡ

ಲೋಕಸಭಾ ಚುನಾವಣೆ: ದ.ಕ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್. ಆರ್ ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ನಾಮ ಪತ್ರ ಸಲ್ಲಿಸಿದರು.

ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ,ಅಭಿಮಾನಿಗಳೊಂದಿಗೆ ಪದ್ಮರಾಜ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

ಉಡುಪಿ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ – Vishwanews24

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ‌.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್‌.ಲೋಬೊ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ,ಮಾಜಿ ಸಚಿವ ಅಭಯಚಂದ್ರ ಜೈನ್, ಮತ್ತಿತರರು ಉಪಸ್ಥಿತರಿದ್ದರು.

Leave a Reply