ಮಂಗಳೂರು,: ಪಂಪ್‌ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಸಂಸದ ನಳಿನ್ ಅವರ ಸಾಧನೆ ಎಂದು ಎಂದು ದ.ಕ. ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಆರೋಪಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳ ಹಾಗೂ ಕಾರ್ಯಕಾರಿಣಿ ಸಮಿತಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಹೆಸರಿನಲ್ಲಿ ಮತ ಕೇಳಿದ ಸಂಸದ ನಳಿನ್ ಕುಮಾರ್ ಕಟೀಲು ಅವರು ದ.ಕ. ಜಿಲ್ಲೆಗೆ ಯಾವುದೇ ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬದಲಾಗಿ ರಾಷ್ಟ್ರೀಯ ಹೆದ್ದಾರಿಯ ನೂರಾರು ಸಮಸ್ಯೆಗಳು ಅಧಿಕಗೊಂಡು, ಪಂಪ್‌ವೆಲ್ ಪ್ಲೈಓವರ್ ಸೇರಿದಂತೆ ಹಲವು ವೈಫಲ್ಯಗಳೇ ಕಾಣಸಿಗುತ್ತಿವೆ ಎಂದು ಟೀಕಿಸಿದರು.
ಈ ವೇಳೆ ಮಾತನಾಡಿದ ರಮಾನಾಥ ರೈ, ಪ್ರಸ್ತುತ ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿಂದ ಯಾವುದೇ ಕೆಲಸ ಆಗುತ್ತಿಲ್ಲ. ಹಿಂದಿನ ಶಾಸಕರು ಮಾಡಿದ ಕೆಲಸಗಳನ್ನು ಮಾಡುತ್ತಿದ್ದಾರೆ ಮಾತ್ರ. ದ.ಕ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ ಜಯಭೇರಿ ಆಗುವಂತೆ ಕಾರ್ಯಕರ್ತರು ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ಸಂಸದೀಯ ಕಾರ್ಯದರ್ಶಿ ಐವನ್ ಡಿ’ಸೋಜಾ, ಪ್ರಮುಖರಾದ ಕೆ.ಎಸ್.ಮಹಮ್ಮದ್ ಮಸೂದ್, ಅಭಯಚಂದ್ರ ಜೈನ್, ಜೆ.ಆರ್ ಲೋಬೋ, ಮೊದಿನ್ ಬಾವಾ, ಕಣಚೂರು ಮೋನು, ರಾಜಶೇಖರ್ ಕೋಟ್ಯಾನ್, ಶಾಲೆಟ್‌ಪಿಂಟೋ,ಎಂ.ಎಸ್ ಮಹಮ್ಮದ್, ಭರತ್ ಮುಂಡೋಡಿ, ಕವಿತಾ ಸನಿಲ್, ಪುರುಷೋತ್ತಮ ಚಿತ್ರಾಪುರ, ನವೀನ್ ಡಿ’ಸೋಜಾ, ಪ್ರಸಾದ್‌ರಾಜ್ ಕಾಂಚನ್, ಪದ್ಮನಾಭ ನರಿಂಗಾನ, ಸಂತೋಷ್ ಕುಮಾರ್ ಶೆಟ್ಟಿ, ನೀರಜ್‌ಪಾಲ್, ನಝೀರ್ ಬಜಾಲ್ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…