ಸುಬ್ರಹ್ಮಣ್ಯ: ಭಾರತದ ಅತೀ ದೊಡ್ಡ ಪ್ರಜಾಪ್ರಭುತ್ವ ಹಬ್ಬವಾದ ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂದು ಬಿಜೆಪಿ ಕೊಡಗು – ಸೋಮವಾರಪೇಟೆ ಭಾಗದ ಮೋದಿ ಅಭಿಮಾನಿಗಳು ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಸೋಮವಾರ ಬೆಳಗ್ಗೆ ಉರುಳು ಸೇವೆ ನಡೆಸಿದರು.
ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಮಹಾರುದ್ರಯಾಗ ನಡೆಸಲಾಗಿತ್ತು. ಮೋದಿಯವರ ನಕ್ಷತ್ರ, ಹೆಸರಿನಲ್ಲಿ ಸಂಕಲ್ಪ ಮಾಡಿ ಪೂರ್ಣಾಹುತಿ ನೀಡಲಾಗಿತ್ತು. ಈಗ, ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಕೊಡಗು – ಸೋಮವಾರಪೇಟೆ ಭಾಗದ ಮೋದಿ ಅಭಿಮಾನಿಗಳು ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ಉರುಳು ಸೇವೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಮತ್ತೂಮ್ಮೆ ನರೇಂದ್ರ ಮೋದಿ ಅವರು ದೇಶದ ಪ್ರಧಾನಿ ಆಗಬೇಕು ಎಂದು ಆರಂಭದಲ್ಲಿ ಶ್ರೀ ದೇವರ ದರ್ಶನ ಪಡೆದ ಇವರು ಕೊಡಗಿನ ರವಿ ರೈ ಎಂಬವರ ಮುಂದಾಳತ್ವದಲ್ಲಿ ಕುಮಾರ, ರಾಮು, ಮಣಿ, ಕಿರ್ತು, ಸುಧಾ, ಇಶಾ, ಜಯರಾಮ್, ಕುಮಾರ, ರಮೇಶ್, ಗಗನ, ಭಾಸ್ಕರ, ನಂದ, ಮೋಹನ, ಸತೀಶ್, ಮಂಜು, ಸತೀಶ್ ಎನ್, ಚೇತನ್, ಕೃಷ್ಣ ಶಿವಣ್ಣ, ಮಂಜ ಸಹಿತ 16 ಮಂದಿ ಉರುಳು ಸೇವೆ ನಡೆಸಿದ್ದಾರೆ.
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…
ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ : ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…