ಶಿವಮೊಗ್ಗ: ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ಬುಧವಾರ ದೆಹಲಿಯಲ್ಲಿ ಪಕ್ಷದ ಸಭೆ ಕರೆಯಲಾಗಿದ್ದು, ನಾನೂ ಭಾವಹಿಸುತ್ತೇನೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರ ಮನಸ್ಸಿನಲ್ಲಿ ಏನಿದೆಯೋ ತಿಳಿದಿಲ್ಲ. ಟಿಕೆಟ್ ಹಂಚಿಕೆಯಲ್ಲಿ ಅವರ ತೀರ್ಮಾನವೇ ಅಂತಿಮ. ಬಿಜೆಪಿ–ಜೆಡಿಎಸ ಹೊಂದಾಣಿಕೆ ನಿಶ್ಚಿತವಾಗಿದೆ. ಆದರೆ ಸ್ಥಾನ ಹಂಚಿಕೆ ಅಂತಿಮವಾಗಿಲ್ಲ ಎಂದರು.
ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ.ಅವರ ಒಳ್ಳೆಯ ಕೆಲಸಗಳನ್ನು ಸಹಿಸದೇ ಕೆಲವರು ಈ ರೀತಿ ಮಾಡಿದ್ದಾರೆ. ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು ಹೇಳಿದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದ ವರದಿ ಕೈ ಸೇರಿ ಮೂರು ನಾಲ್ಕು ದಿನ ಕಳೆದರೂ ಸರ್ಕಾರ ಅದನ್ನು ಬಿಡುಗಡೆ ಮಾಡಿಲ್ಲ. ಎಫ್ಎಸ್ಎಲ್ ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ಆ ವರದಿಯಲ್ಲಿರುವ ಅಂಶಗಳನ್ನು ಬಹಿರಂಗಗೊಳಿಸಬೇಕು ಎಂದು ಒತ್ತಾಯಿಸಿದರು.
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…