ಬೆಂಗಳೂರು: ಲೋಕಸಭಾ ಚುನಾವಣೆಗೆ ಕೇವಲ ತಿಂಗಳು ಬಾಕಿ ಇರುವಾಗಲೇ ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
14- 16 ಕ್ಷೇತ್ರಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ. ಬಿಜೆಪಿ ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಗೆಲುವು ಸ್ಪಷ್ಟ ಇರುವ ಕ್ಷೇತ್ರಗಳ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಗೆಲ್ಲುವ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡು ಮತ್ತು ಮೂರನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕೊನೆ ಗಳಿಗೆಯಲ್ಲಿ ಕೆಲ ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಈ ಕಾರಣಕ್ಕೆ ಈ ಬಾರಿ ಬಹಳ ಬೇಗ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಯಾಗಲಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…