Featured

ಲೋಕಸಭಾ ಚುನಾವಣೆ –  ಸಮರ್ಪಕ ದಾಖಲೆಗಳಿಲ್ಲದೆ 50,000ರೂ. ಕ್ಕೂ ಮೀರಿದ ನಗದು ಕೊಂಡೊಯ್ಯುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ – Vishwanews24

ಲೋಕಸಭಾ ಚುನಾವಣೆ –  ಸಮರ್ಪಕ ದಾಖಲೆಗಳಿಲ್ಲದೆ 50,000ರೂ. ಕ್ಕೂ ಮೀರಿದ ನಗದು ಕೊಂಡೊಯ್ಯುವಂತಿಲ್ಲ: ಉಡುಪಿ ಜಿಲ್ಲಾಧಿಕಾರಿ

ಉಡುಪಿ : ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಮರ್ಪಕ ದಾಖಲೆಗಳಿಲ್ಲದೆ ರೂ.50,000/- ಕ್ಕೂ ಮೀರಿದ ನಗದು ಹಣವನ್ನು ಕೊಂಡೊಯ್ಯುವಂತಿಲ್ಲ ಎಂದು ಉಡುಪಿ ಚಿಕ್ಕಗಳೂರು ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಂದು ವೇಳೆ ದಾಖಲೆ ರಹಿತ ನಗದು ದೊರೆತಲ್ಲಿ ಸದ್ರಿ ನಗದನ್ನು ಮುಟ್ಟುಗೋಲು ಹಾಕಲಾಗುವುದು, ಹಾಗೂ ಸಂಬಂಧಿಸಿದವರ ಮೇಲೆ ಪ್ರಕರಣ ದಾಖಲಿಸಲಾಗುವುದು. ಆದ್ದರಿಂದ ಸಾಧ್ಯವಾದಷ್ಟು ಮಟ್ಟಿಗೆ ನಗದು ಹಣ ಸಾಗಾಣಿಕೆ ಬದಲಿಗೆ ಖಾತೆ ವರ್ಗಾವಣೆ, UPI ಹಾಗೂ ಇತರೆ ಮಾಧ್ಯಮದ ಮೂಲಕ ಹಣವನ್ನು ವರ್ಗಾಯಿಸುವಂತೆ ಸೂಚನೆ ನೀಡಿದ್ದಾರೆ.

ಹಾಗೂ ಈ ವಿಚಾರವಾಗಿ ಸಂಶಯಾಸ್ಪದ ವ್ಯವಹಾರಗಳ ಮೇಲೆ ನಿಗಾ ಇಡಲು ಬ್ಯಾಂಕ್‌ ಮತ್ತು ಆದಾಯ ತೆರಿಗೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಚುನಾವಣಾ ಕೋಶ ರಚಿಸಲಾಗಿದೆ. ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯ ಪೂರ್ಣ ಪ್ರಮಾಣದ ಅನುಷ್ಟಾನಕ್ಕಾಗಿ ಒಟ್ಟು 15 ಚೆಕ್‌ಪೋಸ್ಟ್‌ಗಳನ್ನು ಗುರುತಿಸಲಾಗಿದ್ದು, ಈ ಚೆಕ್‌ಪೋಸ್ಟ್‌ಗಳಲ್ಲಿ 24×7 ಮಾದರಿಯಲ್ಲಿ ಕಾರ್ಯ ನಿರ್ವಹಿಸಲು ಒಟ್ಟು 52 SST ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ. ಜೊತೆಗೆ ಈ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ತಮ್ಮ ವಾಹನಗಳನ್ನು ತಪಾಸಣೆಗೊಳಿಸಲು ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆಯಲ್ಲಿ HOME VOTING ಮಾಡಲು ಬಯಸುವ ಹಿರಿಯ ನಾಗರೀಕರ ವಯಸ್ಸನ್ನು ಆಯೋಗವು 80 ರಿಂದ 85 ವರ್ಷಕ್ಕೆ ಪರಿಷ್ಕರಿಸಲಾಗಿರುತ್ತದೆ. ಹಿರಿಯ ನಾಗರೀಕರು ಹಾಗೂ ವಿಕಲಚೇತನರ ಮನೆಯಂದಲೇ ಮತ ಚಲಾಯಿಸಲು ಅವಕಾಶವಿದೆ. ಹಿರಿಯ ನಾಗರೀಕರು ಹಾಗೂ ವಿಕಲಚೇತನರಿಗೆ ಮತಗಟ್ಟೆಗೆ ತೆರಳಿ ಮತದಾನ ಮಾಡಲು ವಾಹನದ ವ್ಯವಸ್ಥೆಯನ್ನು ಮಾಡಲಾಗಿದ್ದು, ತೀರಾ ಅಶಕ್ತರು ಮಾತ್ರ HOME VOTING ಸೌಲಭ್ಯವನ್ನು ಪಡೆಯಬಹುದಾಗಿದೆ.

ಎಲ್ಲಾ ಮತದಾರರು ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕಾರ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

17 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

18 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

18 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

19 hours ago