ನವದೆಹಲಿ: ಈಗ ದೇಶದಲ್ಲಿ ಲೋಕಸಭಾ ಚುನಾವಣೆ ನಡೆದರೆ ಬಿಜೆಪಿ (BJP) ನೇತೃತ್ವದ ಎನ್‌ಡಿಎಗೆ (NDA) 358-398 ಸ್ಥಾನ ಸಿಗಲಿದೆ ಟೈಮ್ಸ್‌ನೌ ವಾಹಿನಿ ನಡೆಸಿದ ಸಮೀಕ್ಷೆ ತಿಳಿಸಿದೆ.
INDIA ಒಕ್ಕೂಟಕ್ಕೆ 110-130, ವೈಎಸ್‌ಆರ್‌ಸಿಪಿ 21-22, ಬಿಜೆಡಿ 10-11, ಇತರರು 11-15 ಸ್ಥಾನ ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದೆ.
2019ರ ಚುನಾವಣೆಯಲ್ಲಿ ಎನ್‌ಡಿಎ 303, INDIA ಒಕ್ಕೂಟ 116, ಇತರರು 44 ಸ್ಥಾನವನ್ನು ಗೆದ್ದಿದ್ದರು. ಒಟ್ಟು 543 ಕ್ಷೇತ್ರಗಳಿಗೆ ಲೋಕಸಭಾ ಚುನಾವಣೆ ನಡೆಯಲಿದೆ.
ಕರ್ನಾಟಕದಲ್ಲಿ ಎಷ್ಟು?
ಬಿಜೆಪಿ 21-23, ಕಾಂಗ್ರೆಸ್ 4-6, ಜೆಡಿಎಸ್ 1-2 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನವನ್ನು ಗೆದ್ದರೆ, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್, ಹಾಸನದಿಂದ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ, ಮಂಡ್ಯದಿಂದ ಸುಮಲತಾ ಗೆದ್ದಿದ್ದರು.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 22 ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಎಂಸಿ ಕೋಟೆಯನ್ನು ಛಿದ್ರ ಮಾಡಲಿದೆ. ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನಗಳು ಸಂಪೂರ್ಣವಾಗಿ ಎನ್‌ಡಿಎ ಗೆಲ್ಲಲಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ INDA ಒಕ್ಕೂಟ 65 ಸ್ಥಾನಗಳಿಸಲಿದೆ ಎಂದು ಹೇಳಿದೆ.
ಈ ಬಾರಿ 400 ಸ್ಥಾನ ಗೆಲ್ಲಬೇಕು ಎಂದು ಬಿಜೆಪಿ ಘೋಷಣೆ ಮೊಳಗಿಸುತ್ತಿದ್ದರೂ 400 ಸ್ಥಾನಗಳನ್ನು ಎನ್‌ಡಿಎ ಗಳಿಸುವುದು ಕಷ್ಟ ಎಂದು ಸಮೀಕ್ಷೆ ತಿಳಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…