ಉಡುಪಿ, : ಭಾರತ ಚುನಾವಣಾ ಆಯೋಗ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಕ್ಟೋಬರ್ 6 ರಂದು ಉಪ ಚುನಾವಣೆ ಘೋಷಣೆ ಮಾಡಿದೆ. ಅದರಂತೆ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಒಳಪಡುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ನವೆಂಬರ್ ೦3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ರವಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 6 ಕ್ಕೆ ಮತ ಎಣಿಕೆ ನಡೆಯಲಿದೆ. ಬೈಂದೂರಿನಲ್ಲಿ 2,21,972 ಮತದಾರರಿದ್ದಾರೆ. 243 ಮತಗಟ್ಟೆಗಳನ್ನು ಮತ್ತು 3 ಹೆಚ್ಚುವರಿ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದು ಹೇಳಿದರು.
ಸಹಾಯಕ ಚುನಾವಣಾಧಿಕಾರಿಯಾಗಿ ಜಿಲ್ಲಾಧಿಕರಿಗಳ ಭೂ ಮಾಪನಾ ತಾಂತ್ರಿಕ ಸಹಾಯಕರು ಹಾಗೂ ಭೂ ದಾಖಲೆಗಳ ಉಪ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ 246 ಮತಗಟ್ಟೆ ಅಧಿಕಾರಿಗಳು, 246 ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ 123 ಮೀಸಲು ಸಿಬ್ಬಂದಿ ಅಗತ್ಯವಿದೆ ಎಂದು ಡಿಸಿ ಹೇಳಿದರು. ಇನ್ನು ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…