ಉಡುಪಿ

ಲೋಕಸಭೆಗೆ ಉಪ ಚುನಾವಣೆ ಹಿನ್ನೆಲೆ, ಉಡುಪಿಯಲ್ಲೂ ಮಾದರಿ ಚುನಾವಣಾ ನೀತಿ ಸಂಹಿತೆ-ಡಿಸಿ ಪ್ರೀಯಾಂಕ

ಉಡುಪಿ, : ಭಾರತ ಚುನಾವಣಾ ಆಯೋಗ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಕ್ಟೋಬರ್ 6 ರಂದು ಉಪ ಚುನಾವಣೆ ಘೋಷಣೆ ಮಾಡಿದೆ. ಅದರಂತೆ ಶಿವಮೊಗ್ಗ ಲೋಕಸಭಾ ವ್ಯಾಪ್ತಿಗೆ ಒಳಪಡುವ ಉಡುಪಿ ಜಿಲ್ಲೆಯ ಬೈಂದೂರು ವಿಧಾನ ಸಭಾ ಕ್ಷೇತ್ರದಲ್ಲಿ ನವೆಂಬರ್ ೦3 ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ತಕ್ಷಣದಿಂದ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ರವಿವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 6 ಕ್ಕೆ ಮತ ಎಣಿಕೆ ನಡೆಯಲಿದೆ. ಬೈಂದೂರಿನಲ್ಲಿ 2,21,972 ಮತದಾರರಿದ್ದಾರೆ. 243 ಮತಗಟ್ಟೆಗಳನ್ನು ಮತ್ತು 3 ಹೆಚ್ಚುವರಿ ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುವುದು ಎಂದು ಹೇಳಿದರು.

ಸಹಾಯಕ ಚುನಾವಣಾಧಿಕಾರಿಯಾಗಿ ಜಿಲ್ಲಾಧಿಕರಿಗಳ ಭೂ ಮಾಪನಾ ತಾಂತ್ರಿಕ ಸಹಾಯಕರು ಹಾಗೂ ಭೂ ದಾಖಲೆಗಳ ಉಪ ನಿರ್ದೇಶಕರನ್ನು ನೇಮಕ ಮಾಡಲಾಗಿದೆ. ಚುನಾವಣೆ ಕರ್ತವ್ಯಕ್ಕೆ 246 ಮತಗಟ್ಟೆ ಅಧಿಕಾರಿಗಳು, 246 ಸಹಾಯಕ ಮತಗಟ್ಟೆ ಅಧಿಕಾರಿಗಳು ಹಾಗೂ 123 ಮೀಸಲು ಸಿಬ್ಬಂದಿ ಅಗತ್ಯವಿದೆ ಎಂದು ಡಿಸಿ ಹೇಳಿದರು. ಇನ್ನು ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago