ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಭರ್ಜರಿ ತಯಾರಿ ; ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಸೋಮವಾರ ಕೇಂದ್ರ ಚುನಾವಣಾ ಸಮಿತಿ ಸಭೆ – Vishwanews24
ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಲೋಕ ಸಮರಕ್ಕೆ ಸಿದ್ದರಾಗುತ್ತಿದ್ದಾರೆ.
ಲೋಕ ಸಮರಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ಸಭೆ ಏರ್ಪಡಿಸಲಾಗಿದೆ, ಸಭೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳು ಹಾಗೂ 28 ಕ್ಷೇತ್ರಗಳಲ್ಲಿ ಮಾಡಬೇಕಾದ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಲಾಗುತ್ತದೆ.
ಸೋಮವಾರ ನಡೆಯುವ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಭಾಗವಹಿಸಲಿದ್ದಾರೆ, ಕೇಂದ್ರ ಚುನಾವಣಾ ಸಮಿತಿ ಸಭೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

