ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್ ಲೋಕಸಭೆ ಚುನಾವಣೆಗೆ ಬೇರೆ ರೀತಿಯ ತಂತ್ರಗಾರಿಕೆ ಪ್ರಯೋಗಿಸಲು ನಿರ್ಧರಿಸಿದೆ. ರಾಜ್ಯದ ಪ್ರಬಲ ನಾಯಕ ಬಿ.ಎಸ್. ಯಡಿಯೂರಪ್ಪ ಅವರಿಗೆ ಚುನಾವಣೆಯ ಸಂಪೂರ್ಣ ಅಧಿಕಾರ ನೀಡಲು ತೀರ್ಮಾನಿಸಿದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ವೇಗಕ್ಕೆ ಅಂಕುಶ ಹಾಕಿತ್ತು. ಹೀಗಾಗಿ ಬಿಜೆಪಿ ಗೆಲುವಿನ ಸನಿಹದಲ್ಲಿ ಮುಗ್ಗರಿಸಿತ್ತು. ಇದರಿಂದ ಪಾಠ ಕಲಿತಿರುವ ಬಿಜೆಪಿ ಲೋಕಸಭೆ ಚುನಾವಣೆಯಲ್ಲಿ ತನ್ನ ಹಳೆಯ ತಂತ್ರಗಾರಿಕೆಗಳನ್ನು ಬದಿಗಿಟ್ಟು, ಚುನಾವಣೆಯ ಉಸ್ತುವಾರಿಯನ್ನು ಬಿಎಸ್‌ವೈ ವಹಿಸಲು ನಿರ್ಧರಿಸಿದೆ.
20 ಕ್ಷೇತ್ರಗಳಲ್ಲಿ ಗೆಲ್ಲಬೇಕೆಂಬ ಗುರಿ ಹೊಂದಿರುವ ಬಿಜೆಪಿ ಹೈಕಮಾಂಡ್, ಚುನಾವಣೆ ಸಿದ್ಧತೆ, ಅಭ್ಯರ್ಥಿ ಆಯ್ಕೆ, ಪ್ರಚಾರ ತಂತ್ರಗಳಲ್ಲಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಅಧಿಕಾರವನ್ನು ಯಡಿಯೂರಪ್ಪ ಅವರಿಗೆ ನೀಡಬೇಕೆಂದು ಹೈಕಮಾಂಡ್ ನಿರ್ಧರಿಸಿರುವುದಾಗಿ ಗೊತ್ತಾಗಿದೆ.
ಹೀಗಾಗಿಯೇ ಅಧಿಕ ಸ್ಥಾನಗಳಲ್ಲಿ ಗೆದ್ದು ರಾಜ್ಯದಲ್ಲಿ ತಮ್ಮ ವರ್ಚಸ್ಸು ಕುಂದಿಲ್ಲ ಎಂದು ಸಾಬೀತುಪಡಿಸಲು ಯಡಿಯೂರಪ್ಪ ಅವರೂ ಕೂಡ ಉತ್ಸುಕರಾಗಿದ್ದಾರೆ. ಮೇಲಿಂದ ಮೇಲೆ ಸಭೆಗಳನ್ನು ನಡೆಸುತ್ತಿರುವ ಅವರು ಸೂಕ್ತ ಅಭ್ಯರ್ಥಿ ಆಯ್ಕೆಗಾಗಿ ಈಗಿನಿಂದಲೇ ಕಾರ್ಯಪ್ರವೃತ್ತರಾಗಿದ್ದಾರೆ ಎನ್ನಲಾಗಿದೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…