ಬೆಂಗಳೂರು: 2019ರ ಲೋಕಸಭಾ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಈಗಾಗಲೇ ಪ್ರಚಾರದ ಸಿದ್ಧತೆಯಲ್ಲಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ಅವರು ದೇಶಾದ್ಯಂತ ಸುಮಾರು 50 ರ್ಯಾಲಿಗಳಲ್ಲಿ ಭಾಗವಹಿಸಲಿದ್ದು ಅವುಗಳಲ್ಲಿ ಕರ್ನಾಟಕದಲ್ಲಿ ನಡೆಸುವ ರ್ಯಾಲಿಗಳು ಕೂಡ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಪ್ರಮುಖವಾಗಿದೆ.
ಪಂಜಾಬ್ ರಾಜ್ಯದ ಮುಕ್ತಸಾರ್ ಜಿಲ್ಲೆಯಲ್ಲಿ ಕಳೆದ ವಾರ ಮತ್ತು ನಿನ್ನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಮೂಲಕ ಪ್ರಧಾನಿ ಮೋದಿಯವರು ಈಗಾಗಲೇ ತಮ್ಮ ಮಿಂಚಿನ ದಾಳಿಯ ರೀತಿಯ ಪ್ರಚಾರ ರ್ಯಾಲಿಗಳನ್ನು ಭಾಗವಹಿಸಿದ್ದಾರೆ. ಮುಂದಿನ ತಿಂಗಳು ಕರ್ನಾಟಕದಲ್ಲಿ ಕೂಡ ಅವರು ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಮೋದಿಯವರು ಕರ್ನಾಟಕದಲ್ಲಿ ಬೃಹತ್ ರೈತ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಅದು ಹಾವೇರಿ ಅಥವಾ ಚಿಕ್ಕೋಡಿಯಲ್ಲಿ ಆಗಿರಬಹುದು. ಸ್ಥಳ ಮತ್ತು ದಿನಾಂಕ ಸದ್ಯದಲ್ಲಿಯೇ ನಿಗದಿಯಾಗಲಿದೆ. ಅದು ಆಗಸ್ಟ್ ಮಧ್ಯಭಾಗದಲ್ಲಿ ಇರಬಹುದು. ಲೋಕಸಭೆ ಚುನಾವಣೆಗೆ ಮುನ್ನ ರೈತರನ್ನು ಭೇಟಿ ಮಾಡುವ ಕಾರ್ಯಕ್ರಮ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದ್ದಾರೆ.
ಮಧ್ಯಪ್ರದೇಶ, ರಾಜಸ್ತಾನ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಈ ವರ್ಷ ನಡೆಯುವ ಚುನಾವಣಾ ಸಂಬಂಧ ರ್ಯಾಲಿಗಳಿಗೆ ಹೊರತಾದ ರ್ಯಾಲಿ ಇದಾಗಲಿದೆ. ಪ್ರಧಾನಿ ಮೋದಿಯವರು 150 ಕ್ಷೇತ್ರಗಳಲ್ಲಿ ಸುಮಾರು 50 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ. ಮೋದಿಯವರ ಜೊತೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಹಿರಿಯ ನಾಯಕರಾದ ನಿತಿನ್ ಗಡ್ಕರಿ ಮತ್ತು ರಾಜನಾಥ್ ಸಿಂಗ್ ಅವರು ಕೂಡ ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದರು.
ಜುಲೈ 28ಕ್ಕೆ ಅಮಿತ್ ಶಾ ಭೇಟಿ: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇದೇ ತಿಂಗಳ 28ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದು, ಪಕ್ಷದಲ್ಲಿ ಸ್ಥಾನಮಾನಗಳನ್ನು ಹಂಚಿಕೆ ಮಾಡಿ ಲೋಕಸಭಾ ಚುನಾವಣೆಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ಸನ್ನದ್ಧು ಮಾಡಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯವರೆಗೆ ಬಿ ಎಸ್ ಯಡಿಯೂರಪ್ಪನವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುವ ಸಾಧ್ಯತೆಯಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…