ಶಿವಮೊಗ್ಗ: ಇಂದು ಪ್ರಧಾನಿ ನರೇಂದ್ರ ಮೋದಿ ಮಲೆನಾಡು ಶಿವಮೊಗ್ಗಕ್ಕೆ ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ನಗರ ಪೂರ್ತಿ ಕಮಲಮಯವಾಗಿದೆ.
ಕೇರಳದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಅಪರಾಹ್ನ 1:30ಕ್ಕೆ ಶಿವಮೊಗ್ಗದ ಏರ್ಪೋರ್ಟ್ಗೆ ಬಂದಿಳಿಯಲಿದ್ದು ಅಲ್ಲಿಂದ ಅಲ್ಲಮಪ್ರಭು ಮೈದಾನದವರೆಗೆ ಸುಮಾರು 14 ಕಿ.ಮೀ ಜಿರೋ ಟ್ರಾಫಿಕ್ನಲ್ಲಿ ಆಗಮಿಸಲಿದ್ದಾರೆ. ಸಮಾವೇಶದಲ್ಲಿ 2 ಲಕ್ಷಕ್ಕೂ ಅಧಿಕ ಜನ ಭಾಗವಹಿಸುವ ನಿರೀಕ್ಷೆ ಇದೆ. ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಪೂರ್ತಿ ಖಾಕಿ ಸರ್ಪಗಾವಲು ಹಾಕಲಾಗಿದೆ. ಜೊತೆಗೆ ಆಯಾಕಟ್ಟಿ ಪ್ರದೇಶಗಳಲ್ಲಿ ಕ್ಷೀಪ್ರ ಕಾರ್ಯಾಚರಣೆ ಪಡೆ, ಅರೆ ಸೇನಾ ಪಡೆಯನ್ನು ನಿಯೋಜಿಸಲಾಗಿದೆ.
ಮೋದಿ ಆಗಮನ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಕೆಲಕಾಲ ಜಿರೋ ಟ್ರಾಫಿಕ್ಗಾಗಿ ಬಂದ್ ಆಗಲಿವೆ. ಪ್ರಧಾನಿ ಮೋದಿ ಶಿವಮೊಗ್ಗದಲ್ಲಿ 2.5 ಲಕ್ಷಕ್ಕೂ ಅಧಿಕ ಜನರನ್ನುದ್ದೇಶಿಸಿ ಚುನಾವಣಾ ಭಾಷಣ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿಯ ಮುಖ್ಯ ಸಚೇತಕ ಎನ್ ರವಿ ಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗದ ಸಂಸದ ಬಿ.ವೈ. ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನ ಅಭ್ಯರ್ಥಿ ಬ್ರಜೇಶ್ ಚೌಟ. ಶಾಸಕರು, ಮಾಜಿ ಶಾಸಕರುಗಳು, ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಆರಗ ಜ್ಞಾನೇಂದ್ರ ಸೇರಿದಂತೆ ಇತರರು ವೇದಿಕೆ ಮೇಲೆ ಇರಲಿದ್ದಾರೆ .
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…