ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ ; ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರವನ್ನೂ ಕಳೆದುಕೊಳ್ಳಲಿದೆ : ಮಮತಾ ಬ್ಯಾನರ್ಜಿ -Vishwanews24

Featured, ರಾಷ್ಟ್ರ ನ್ಯೂಸ್

ಕೋಲ್ಕತ್ತ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ, ದೊಡ್ಡ ರಹಸ್ಯ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣ, ಪೊಲೀಸ್​, ವಿದ್ಯುನ್ಮಾನ ಮತಯಂತ್ರಗಳ ಮೂಲಕ ರಾಜ್ಯವನ್ನು ಅತಿಕ್ರಮಣ ಮಾಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರವನ್ನೂ ಕಳೆದುಕೊಳ್ಳಲಿದೆ. ಚುನಾವಣೆಯಲ್ಲಿ ಬ್ಯಾಲೆಟ್​ ಪೇಪರ್​ನ್ನೇ ಬಳಕೆ ಮಾಡಬೇಕು ಎಂದು ಆಗ್ರಹಿಸಿದರು.

ಯಾವ ಹೋರಾಟ ನಡೆಸುತ್ತಿದೆ ಬಿಜೆಪಿ..? ಯಾರು ಅವರು…? ಬಿಜೆಪಿ ಬಗ್ಗೆ ಬಂಗಾಳದಲ್ಲಿ ಯಾರಿಗೂ ಗೊತ್ತಿಲ್ಲ. ಆರ್​ಎಸ್​ಎಸ್​ನವರು ಶಾಲಾ ದಿನಗಳಿಂದಲೂ ಕೆಟ್ಟ ಕೆಲಸಗಳನ್ನೇ ಮಾಡುತ್ತ ಬಂದಿದ್ದಾರೆ. ಬಿಹಾರದಲ್ಲಿ ಸರ್ಕಾರ ಆರ್​ಎಸ್​ಎಸ್​ ಕಾರ್ಯ ಚಟುವಟಿಕೆ ಮೇಲೆ ನಿಗಾ ಇಡುವಂತೆ ಪೊಲೀಸರಿಗೆ ತಿಳಿಸಿದೆ. ಆ ಕೆಲಸವನ್ನು ನಾವಿನ್ನೂ ಮಾಡಿಲ್ಲ. ಈ ಬಗ್ಗೆ ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.