ನವದೆಹಲಿ: ಲೋಕಸಭೆ ಚುನಾವಣೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ಗಿಂತಲೂ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಸ್ಫರ್ಧಿಸುತ್ತಿದ್ದು, ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ವ್ಯಕ್ತಪಡಿಸಿದೆ.
ಈ ಬಾರಿ ಒಟ್ಟು 545 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 437 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್ ಕೇವಲ 423 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಬಿಜೆಪಿ ತನ್ನ ನೆಲೆಯಿಲ್ಲದ ರಾಜ್ಯಗಳಲ್ಲೂ ನೆಲೆ ಕಂಡುಕೊಳ್ಳುವಲ್ಲಿ ಮತ್ತು ಪಕ್ಷವನ್ನು ಸಂಘಟಿಸಲು ಹೆಚ್ಚಿನ ಒತ್ತು ನೀಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಅತಿ ಹೆಚ್ಚಿನ ಕ್ಷೇತ್ರದಲ್ಲಿ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಾಧ್ಯವಾಗಿದೆ.
2009ರಲ್ಲಿ ಬಿಜೆಪಿ 433 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರೆ, ಕಾಂಗ್ರೆಸ್ 440 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಆದರೆ ಬಿಜೆಪಿ ಕೇವಲ 116 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ 206 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮೈತ್ರಿ ಪಕ್ಷಗಳೊಂದಿಗೆ ಸರ್ಕಾರ ರಚಿಸಿತ್ತು.
ಆದರೆ 2014ರಲ್ಲಿ 428 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ 282 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಅಭೂತಪೂರ್ವ ಗೆಲುವು ಸಾಧಿಸಿತ್ತು. ಆದರೆ 464 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಕೇವಲ 44 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೀನಾಯವಾಗಿ ಸೋಲನುಭವಿಸಿತ್ತು. ಈ ಬಾರಿ ಕಾಂಗ್ರೆಸ್ 423 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇನ್ನು ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…