ಇಸ್ಲಾಮಾಬಾದ್: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಪತ್ರಕರ್ತರೊಂದಿಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ಮುಂದಿನ ಸರ್ಕಾರವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದಲ್ಲಿದ್ದರೆ ಪಾಕಿಸ್ತಾನದೊಂದಿಗಿನ ಕಾಶ್ಮೀರದ ಸಮಸ್ಯೆಯ ಕುರಿತು ಬಗೆಹರಿಸಿಕೊಳ್ಳಲು ಕೊಂಚ ಭಯಪಡುವ ಸಾಧ್ಯತೆ ಇದೆ. ಬಲಪಂಥೀಯ ಪಕ್ಷವಾದ ಬಿಜೆಪಿಯು ಗೆದ್ದರೆ ಕಾಶ್ಮೀರದಲ್ಲಿನ ಸಮಸ್ಯೆಗೆ ಕೆಲವು ಪರಿಹಾರಗಳನ್ನು ಕಾಣಬಹುದು ಎಂದು ತಿಳಿಸಿದ್ದಾರೆ.
ಈಗ ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾನು ಕಾಣಬಹುದೆಂದು ಎಂದಿಗೂ ಯೋಚಿಸಿಯೇ ಇರಲಿಲ್ಲ. ಇದೀಗ ಮುಸ್ಲಿಂ ಮತ್ತು ಮುಸ್ಲಿಮೇತರ ಮೇಲೆ ದಾಳಿ ಮಾಡಲಾಗುತ್ತಿದೆ. ಹಲವು ವರ್ಷಗಳಿಂದಲೂ ತಮ್ಮ ಅಲ್ಲಿನ ಪರಿಸ್ಥಿತಿ ಬಗ್ಗೆ ಸಂತೋಷವಾಗಿಯೇ ಇದ್ದ ಭಾರತೀಯ ಮುಸ್ಲಿಮರು ಇದೀಗ ತೀವ್ರ ಹಿಂದೂ ರಾಷ್ಟ್ರೀಯತೆಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಇಮ್ರಾನ್ ಖಾನ್ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…