Featured

ಲೋಕಸಭೆ ಚುನಾವಣೆ :ಪ್ರಧಾನಿ ಮೋದಿ ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ : ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್: 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಿದರೆ ಭಾರತ ಜತೆಗಿನ ಶಾಂತಿ ಮಾತುಕತೆಗೆ ಉತ್ತಮ ಅವಕಾಶವಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್  ಹೇಳಿದ್ದಾರೆ.

ಪತ್ರಕರ್ತರೊಂದಿಗಿನ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಭಾರತದಲ್ಲಿ ಮುಂದಿನ ಸರ್ಕಾರವು ವಿರೋಧ ಪಕ್ಷವಾದ ಕಾಂಗ್ರೆಸ್ ನೇತೃತ್ವದಲ್ಲಿದ್ದರೆ ಪಾಕಿಸ್ತಾನದೊಂದಿಗಿನ ಕಾಶ್ಮೀರದ ಸಮಸ್ಯೆಯ ಕುರಿತು ಬಗೆಹರಿಸಿಕೊಳ್ಳಲು ಕೊಂಚ ಭಯಪಡುವ ಸಾಧ್ಯತೆ ಇದೆ. ಬಲಪಂಥೀಯ ಪಕ್ಷವಾದ ಬಿಜೆಪಿಯು ಗೆದ್ದರೆ ಕಾಶ್ಮೀರದಲ್ಲಿನ ಸಮಸ್ಯೆಗೆ ಕೆಲವು ಪರಿಹಾರಗಳನ್ನು ಕಾಣಬಹುದು ಎಂದು ತಿಳಿಸಿದ್ದಾರೆ.

ಈಗ ಭಾರತದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನಾನು ಕಾಣಬಹುದೆಂದು ಎಂದಿಗೂ ಯೋಚಿಸಿಯೇ ಇರಲಿಲ್ಲ. ಇದೀಗ ಮುಸ್ಲಿಂ ಮತ್ತು ಮುಸ್ಲಿಮೇತರ ಮೇಲೆ ದಾಳಿ ಮಾಡಲಾಗುತ್ತಿದೆ. ಹಲವು ವರ್ಷಗಳಿಂದಲೂ ತಮ್ಮ ಅಲ್ಲಿನ ಪರಿಸ್ಥಿತಿ ಬಗ್ಗೆ ಸಂತೋಷವಾಗಿಯೇ ಇದ್ದ ಭಾರತೀಯ ಮುಸ್ಲಿಮರು ಇದೀಗ ತೀವ್ರ ಹಿಂದೂ ರಾಷ್ಟ್ರೀಯತೆಯಿಂದಾಗಿ ಆತಂಕಕ್ಕೊಳಗಾಗಿದ್ದಾರೆ ಎಂದು ಮಾಜಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಇಮ್ರಾನ್‌ ಖಾನ್‌ ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago