ಮುಂಬೈ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಗೆಲುವು ದಾಖಲಿಸಿದರೂ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗುವುದಿಲ್ಲ ಎಂದು ನ್ಯಾಷನಲ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಭವಿಷ್ಯ ನುಡಿದಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಸಲದ ಲೋಕಸಭಾ ಚುನಾವಣೆ ಫಲಿತಾಂಶ ಅಚ್ಚರಿ ಉಂಟುಮಾಡಲಿದೆ, ಬಿಜೆಪಿಗೆ ಅಗತ್ಯ ಸಂಖ್ಯಾ ಬಲದ ಕೊರತೆ ಎದುರಾಗಲಿದೆ, ಒಂದು ವೇಳೆ ಬಿಜೆಪಿ ಇತರೆ ಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚನೆ ಮಾಡಿದರೂ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಾರರು ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಬಿಜೆಪಿ ಅಧಿಕಾರ ರಚನೆಗೆ ಮೈತ್ರಿ ಪಕ್ಷಗಳ ಬೆಂಬಲ ಅತ್ಯಗತ್ಯ ಎಂದು ಹೇಳಿರುವ ಶರದ್ ಪವಾರ್, ನರೇಂದ್ರ ಮೋದಿ 2ನೇ ಬಾರಿಗೆ ಪ್ರಧಾನಿಯಾಗಲು ಸಾಧ್ಯವಿಲ್ಲ. ಬಿಜೆಪಿಗೆ ಬೆಂಬಲ ನೀಡುವ ಇತರೆ ಪಕ್ಷಗಳು ನರೇಂದ್ರ ಮೋದಿ ಹೊರತಾಗಿ ಬೇರೆ ನಾಯಕರನ್ನು ಪ್ರಧಾನಿ ಹುದ್ದೆಗೆ ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.
2014ರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿ ಕೂಟ 326 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಬಿಜೆಪಿ 283 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…