ಚೆನ್ನೈ, : ಮುಂಬರುವ ಲೋಕಸಭೆ ಚುನಾವಣೆಗೆ ಎಐಎಡಿಎಂಕೆ ಹಾಗೂ ಬಿಜೆಪಿ ಮಧ್ಯೆ ಮೈತ್ರಿಯು ತಮಿಳುನಾಡಿನಲ್ಲಿ ಅಂತಿಮಗೊಂಡ ಮರು ದಿನ ಬುಧವಾರದಂದು ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿ ಒಪ್ಪಂದಕ್ಕೆ ಬಂದಿವೆ. ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟ್ಟು 40 ಲೋಕಸಭಾ ಕ್ಷೇತ್ರಗಳ ಪೈಕಿ ತಮಿಳುನಾಡಿನಲ್ಲಿ 39 ಹಾಗೂ ಪುದುಚೆರಿಯಲ್ಲಿ 1 ಸ್ಥಾನವಿದೆ. ಅದರಲ್ಲಿ ಡಿಎಂಕೆ 25ರಿಂದ 28 ಸ್ಥಾನಗಳಲ್ಲಿ ಸ್ಪರ್ಧಿಸುವ ಭರವಸೆ ಇದೆ. ಕಾಂಗ್ರೆಸ್ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡುವ ಆಶಯ ವ್ಯಕ್ತಪಡಿಸಿದೆ.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್, ನಾವು ಕಾಂಗ್ರೆಸ್ ಬಳಿ ಮತ್ತೊಮ್ಮೆ ಚರ್ಚಿಸಿದ ಬಳಿಕ ಸೀಟು ಹಂಚಿಕೆ ಬಗೆಗಿನ ಮಾಹಿತಿ ನೀಡಲಿದ್ದೇವೆ. ಇನ್ನು ಸೀಟು ಹಂಚಿಕೆ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಕಾಂಗ್ರೆಸ್ 16 ಸೀಟುಗಳಿಗೆ ಬೇಡಿಕೆಯಿಟ್ಟಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸುತ್ತೇವೆ. ನಂತರ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ? ಎಲ್ಲಿಂದ ಯಾರು ಕಣಕ್ಕಿಳಿಯಲಿದ್ಧಾರೆ? ಎಂಬುದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಲಿದ್ದೇವೆ ಎಂದರು.
ಇನ್ನು ಕಾಂಗ್ರೆಸ್ ಜತೆಗೆ ಎಡ ಪಕ್ಷಗಳೊಂದಿಗೂ ಡಿಎಂಕೆ ಮಾತುಕತೆ ನಡೆಸುತ್ತಿದೆ. ಎಂಡಿಎಂಕೆ, ವಿಸಿಕೆ ದಲಿತ ಪಕ್ಷ, ಐಯುಎಂಎಲ್ ಮುಸ್ಲಿಂ ಪಕ್ಷದ ಜೊತೆಗೂ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲರನ್ನು ಒಟ್ಟಿಗೆ ಸೇರಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಂತಿಸಲಾಗಿದೆ. ಕನಿಷ್ಠ 25 ಕ್ಷೇತ್ರಗಳಿಂದ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಉಳಿದ ಕ್ಷೇತ್ರಗಳಲ್ಲಿ ಇತರ ಮೈತ್ರಿ ಪಕ್ಷಗಳ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಡಿಎಂಕೆ ನಾಯಕರು ತಿಳಿಸಿದ್ಧಾರೆ.
39 ಲೋಕಸಭಾ ಕ್ಷೇತ್ರಗಳ ಪೈಕಿ 5 ರಲ್ಲಿ ಬಿಜೆಪಿ ಕಣಕ್ಕಿಳಿಯಲಿದೆ. ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…