Featured

ಲೋಕಸಭೆ ಚುನಾವಣೆ : ಮೋದಿ ಸರಕಾರವನ್ನು ಎದುರಿಸಲು ತಮಿಳುನಾಡಿನಲ್ಲಿ ಡಿಎಂಕೆ ಜತೆ ಕಾಂಗ್ರೆಸ್​​ ಮೈತ್ರಿ – Vishwanews24

ಚೆನ್ನೈ, : ಮುಂಬರುವ ಲೋಕಸಭೆ ಚುನಾವಣೆಗೆ ಎಐಎಡಿಎಂಕೆ ಹಾಗೂ ಬಿಜೆಪಿ ಮಧ್ಯೆ ಮೈತ್ರಿಯು ತಮಿಳುನಾಡಿನಲ್ಲಿ ಅಂತಿಮಗೊಂಡ ಮರು ದಿನ ಬುಧವಾರದಂದು ಡಿಎಂಕೆ ಹಾಗೂ ಕಾಂಗ್ರೆಸ್ ಮೈತ್ರಿ ಒಪ್ಪಂದಕ್ಕೆ ಬಂದಿವೆ. ಚೆನ್ನೈನಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಒಟ್ಟು 40 ಲೋಕಸಭಾ ಕ್ಷೇತ್ರಗಳ ಪೈಕಿ ತಮಿಳುನಾಡಿನಲ್ಲಿ 39 ಹಾಗೂ ಪುದುಚೆರಿಯಲ್ಲಿ 1 ಸ್ಥಾನವಿದೆ. ಅದರಲ್ಲಿ ಡಿಎಂಕೆ 25ರಿಂದ 28 ಸ್ಥಾನಗಳಲ್ಲಿ ಸ್ಪರ್ಧಿಸುವ ಭರವಸೆ ಇದೆ. ಕಾಂಗ್ರೆಸ್ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡುವ ಆಶಯ ವ್ಯಕ್ತಪಡಿಸಿದೆ.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್​​, ನಾವು ಕಾಂಗ್ರೆಸ್​​ ಬಳಿ ಮತ್ತೊಮ್ಮೆ ಚರ್ಚಿಸಿದ ಬಳಿಕ ಸೀಟು ಹಂಚಿಕೆ ಬಗೆಗಿನ ಮಾಹಿತಿ ನೀಡಲಿದ್ದೇವೆ. ಇನ್ನು ಸೀಟು ಹಂಚಿಕೆ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಕಾಂಗ್ರೆಸ್​​ 16 ಸೀಟುಗಳಿಗೆ ಬೇಡಿಕೆಯಿಟ್ಟಿದೆ.  ಎಐಸಿಸಿ ಅಧ್ಯಕ್ಷ ರಾಹುಲ್​​ ಗಾಂಧಿ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸುತ್ತೇವೆ. ನಂತರ ಯಾವ ಪಕ್ಷಕ್ಕೆ ಎಷ್ಟು ಕ್ಷೇತ್ರ? ಎಲ್ಲಿಂದ ಯಾರು ಕಣಕ್ಕಿಳಿಯಲಿದ್ಧಾರೆ? ಎಂಬುದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಲಿದ್ದೇವೆ ಎಂದರು.

ಇನ್ನು ಕಾಂಗ್ರೆಸ್​​ ಜತೆಗೆ ಎಡ ಪಕ್ಷಗಳೊಂದಿಗೂ ಡಿಎಂಕೆ ಮಾತುಕತೆ ನಡೆಸುತ್ತಿದೆ. ಎಂಡಿಎಂಕೆ, ವಿಸಿಕೆ ದಲಿತ ಪಕ್ಷ, ಐಯುಎಂಎಲ್​​ ಮುಸ್ಲಿಂ ಪಕ್ಷದ ಜೊತೆಗೂ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲರನ್ನು ಒಟ್ಟಿಗೆ ಸೇರಿಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಂತಿಸಲಾಗಿದೆ. ಕನಿಷ್ಠ 25 ಕ್ಷೇತ್ರಗಳಿಂದ ನಮ್ಮ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು, ಉಳಿದ ಕ್ಷೇತ್ರಗಳಲ್ಲಿ ಇತರ ಮೈತ್ರಿ ಪಕ್ಷಗಳ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ನಿರ್ಧರಿಸಿದ್ದೇವೆ ಎಂದು ಹಿರಿಯ ಡಿಎಂಕೆ ನಾಯಕರು ತಿಳಿಸಿದ್ಧಾರೆ.
39 ಲೋಕಸಭಾ ಕ್ಷೇತ್ರಗಳ ಪೈಕಿ 5 ರಲ್ಲಿ ಬಿಜೆಪಿ ಕಣಕ್ಕಿಳಿಯಲಿದೆ. ಉಳಿದ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago