ಲೋಕಸಭೆ ಚುನಾವಣೆ: `ಶೋಭಾ ಕರಂದ್ಲಾಜೆ’ಗೆ ಟಿಕೆಟ್ ಕೊಡಬಾರದು : ಬಿಜೆಪಿಯಿಂದಲೇ ಅಭಿಯಾನ..-Vishwanews24
ಉಡುಪಿ : ಲೋಕಸಭೆ ಚುನಾವಣೆ ಸಮಯದಲ್ಲೇ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೆಟ್ ಕೊಡಬಾರದು ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಶುರುವಾಗಿದೆ.
ಸಂಸದರಾದ ಬಳಿಕ ಕ್ಷೇತ್ರವನ್ನೇ ಮರೆತಿದ್ದೀರಿ, ಚುನಾವಣೆ ಸಮೀಪವಾಗುತ್ತಿದ್ದಂತೆ ಪ್ರತ್ಯೇಕ್ಷವಾಗಿದ್ದೀರಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಬರೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಯಕ್ಷಿಮಠ ಎಂಬುವರ ವಿರುದ್ಧ ರಾಜ್ಯ ಬಿಜೆಪಿ ಕಾರ್ಯದರ್ಶಿ ಹಾಗೂ ಶೋಭಾ ಕರಂದ್ಲಾಜೆ ಆಪ್ತ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ದೂರು ದಾಖಲಿಸಿದ್ದಾರೆ.
ಶೋಭಾ ಕರಂದ್ಲಾಜೆ ಅಭ್ಯರ್ಥಿಯಾಗಿ ಪುನರಾಯ್ಕೆಯಾಗುವ ಸಂಭವವಿದೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ಆಕ್ರೋಶ ಸ್ಪೋಟಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಪಕ್ಷದ ಹೈಕಮಾಂಡ್ ಎಲ್ಲವನ್ನೂ ನಿರ್ಧಾರ ಮಾಡುತ್ತದೆ ಎಂದು ತಿಳಿಸಿದ್ದಾರೆ.

