ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವ ಪ್ರಕಾಶ್ ರಾಜ್ ಅವರಿಗೆ ಆಮ್‌ಆದ್ಮಿ ಪಕ್ಷ ಬೆಂಬಲ ಸೂಚಿಸಿದೆ.
ಬೆಂಗಳೂರು ಆಮ್‌ಆದ್ಮಿ ಪಕ್ಷದ ನಾಯಕರು ಜೈನ ಭವನದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪ್ರಕಾಶ್ ರಾಜ್ ಅವರಿಗೆ ಬೆಂಬಲ ನೀಡಲು ಸೂಚಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಕಾಶ್, ಉತ್ತರಿಸಲು ಕಾಲ ಮುಗಿಯಿತು ಇದೀಗ ಲೋಕಸಭೆಯಲ್ಲಿ ಪ್ರಶ್ನಿಸುವ ಕಾಲ ಸನ್ನಿಹಿತವಾಗುತ್ತಿದೆ. ನಾನು ಈಗಾಗಲೇ ಘೋಷಿಸಿರುವಂತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆಮ್‌ಆದ್ಮಿ ಪಕ್ಷದ ಬೆಂಬಲ ದೊರೆತಿರುವುದು ಸಂತಸದ ವಿಚಾರ ಎಂದು ಹೇಳಿದರು.
ಬೇರೆ ಪಕ್ಷಗಳು 70 ವರ್ಷಗಳಿಂದ ಮಾಡದೆ ಇರುವ ಕೆಲಸವನ್ನು ಆಮ್‌ಆದ್ಮಿ ಪಕ್ಷ ದೆಹಲಿಯಲ್ಲಿ ಮಾಡಿ ತೋರಿಸಿದೆ. ನಾಗರಿಕರು ಮನಸ್ಸು ಮಾಡಿದರೆ ಪ್ರಪಂಚವನ್ನೇ ಬದಲಾಯಿಸಬಹುದು ಎನ್ನುವುದಕ್ಕೆ ಆಮ್ ಆದ್ಮಿ ಪಕ್ಷ ನಿದರ್ಶನವಾಗಿದೆ. ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮಾತನಾಡಿ, ಪ್ರಕಾಶ್ ರಾಜ್ ಅವರಿಗೆ ನಮ್ಮ ಬೆಂಬಲವಿದೆ, ಅವರು ಎಂದಿಗೂ ಸತ್ಯದ ಪರವಾಗಿ ಹಾಗೂ ಅನ್ಯಾಯ ವಿರುದ್ಧವಾಗಿ ಧ್ವನಿಯೆತ್ತಿದವರು. ಅವರ ಪರವಾಗಿ ಪ್ರಚಾರವನ್ನೂ ಕೂಡ ಮಾಡುತ್ತೇವೆ. ಹಾಗೆಯೇ 2020ರ ಬಿಬಿಎಂಪಿ ಚುನಾವಣೆಯಲ್ಲಿ ಕೂಡ ಆಮ್‌ಆದ್ಮಿ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…