ಮಂಗಳೂರು: ಇಷ್ಟು ದಿನ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿಕೆ ನೀಡುತ್ತಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಇದೀಗ ಲೋಕಸಭೆ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ನಾನು ವಿರೋಧ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯುವ ಸಾಧ್ಯತೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಒಂದು ವೇಳೆ ಅಂಥ ಅವಕಾಶ ಬಂದರೆ ಸ್ಪರ್ಧಿಸಲು ವಿರೋಧ ಇಲ್ಲ. ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸುವ ವಿಚಾರ ಸದ್ಯದ ಮಟ್ಟಿಗಂತೂ ವದಂತಿಯಷ್ಟೆ ಎಂದು ಹೇಳಿದ್ದಾರೆ.
2014, 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಇಂತಹ ವದಂತಿ ಹರಡಿತ್ತು. ಈಗ 2024ರಲ್ಲೂ ಅಂಥದ್ದೊಂದು ವದಂತಿ ಹರಡಿದೆ. ರಾಜಕೀಯ ಆಸಕ್ತಿಯ ಪ್ರಶ್ನೆ ಬೇರೆ, ಅದಕ್ಕೆ ನನ್ನ ವಿರೋಧವಿಲ್ಲ. ಆದರೆ ಸೀಟ್ ಕೇಳಿಕೊಂಡು ಹೋಗುವುದಿಲ್ಲ. ಅಂಥ ಅವಕಾಶ ಬಂದರೆ ಯಾವುದೇ ವಿರೋಧ ಇಲ್ಲ. ಹತ್ತು ವರ್ಷಗಳಿಂದ ಕಾಪಾಡಿಕೊಂಡು ಬಂದಿರೋದನ್ನು ಸ್ವಲ್ಪ ಸಡಿಲ ಮಾಡುತ್ತೇನೆ. ಹಾಗೆ ಆಗಬೇಕು ಎಂದು ಏನಾದರೂ ಭಗವಂತನ ಇಚ್ಛೆ ಇದ್ದರೆ ಅದು ಆಗಿಯೇ ಆಗುತ್ತದೆ. ಆದರೆ ಇದುವರೆಗೆ ನನ್ನನ್ನ ಯಾರೂ ಸಂಪರ್ಕಿಸಿಲ್ಲ. ನಾನೂ ಸಂಪರ್ಕ ಮಾಡಿಲ್ಲ ಎಂದು ಸೂಲಿಬೆಲೆ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…